ಕನ್ನಡ ಭಾಷಾ ಸೇವೆಗೆ ಮಲ್ಲಿಕಾರ್ಜುನ ಖಂಡೇಮ್ಮನವರಿಗೆ ಗೌರವ
Mallikarjuna Khandemmana Honored for Service to the Kannada Language
ಲೋಕದರ್ಶನ ವರದಿ
ಗದಗ, ಸೆ.5: ನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗದಗ ಜಿಲ್ಲಾ ಗೊಲ್ಲ ಸಂಘ ಹಾಗೂ ಗದಗ ಜಿಲ್ಲಾ ಯಾದವ ಸಮಾಜದ ವತಿಯಿಂದ ಶುಕ್ರವಾರ (ಸೆ.4) ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಳೆದ ಮೂರು ದಶಕಗಳಿಂದ ಕನ್ನಡ ಭಾಷಾಭಿಮಾನ, ಕನ್ನಡ ಭಾಷೆಯ ಪ್ರಚಾರ ಹಾಗೂ ಕರ್ನಾಟಕದಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಸ್ವಯಂಪ್ರೇರಣೆಯಿಂದ ಸೇವೆ ಸಲ್ಲಿಸುತ್ತಿರುವ ಗದಗ ತಾಲ್ಲೂಕಿನ ಕಳಸಾಪುರ ಗ್ರಾಮದ ಮಲ್ಲಿಕಾರ್ಜುನ ಖಂಡೇಮ್ಮನವರ ಅವರನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷರಸಾಬ್ ಬರ್ಜಿ, ಅಪರ ಜಿಲ್ಲಾಧಿಕಾರಿ ಡಾ.ದುರ್ಗೇಶ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ದು ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ಕುರುಬ ಸಮಾಜದ ಮುಖಂಡ ಫಕೀರ್ಪ ಹೆಬಸೂರ, ವಿರೇಶ ಪೂಜಾರ, ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪಾಲನಕರ ಸೇರಿದಂತೆ ಗೊಲ್ಲ ಹಾಗೂ ಯಾದವ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 