ಕಾನಿಪ ಜಿಲ್ಲಾ ಪ್ರಶಸ್ತಿಗೆ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಆಯ್ಕೆ
Mallikarjuna Pattanashetty selected for Kanipa district award
ದೇವರಹಿಪ್ಪರಗಿ 17: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2025-26ನೇಪ್ರತಿಷ್ಠಿತ ಜಿಲ್ಲಾ ಪ್ರಶಸ್ತಿಗೆ ದೇವರಹಿಪ್ಪರಗಿ ಕನ್ನಡ ಪ್ರಭ ಪತ್ರಿಕೆಯ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಗಮೇಶ ಉತ್ನಾಳ ತಿಳಿಸಿದ್ದಾರೆ.ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜು.19ರಂದು ಶನಿವಾರ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಸಚಿವ ಶಿವಾನಂದ ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಶೋಕ ಮನಗೂಳಿ,ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಸೇರಿದಂತೆ ಜಿಲ್ಲೆಯ ಶಾಸಕರು, ಸಂಘದ ರಾಜ್ಯ, ಜಿಲ್ಲೆಯ ಅಧ್ಯಕ್ಷರು,ಹಿರಿಯ ಪತ್ರಕರ್ತರು ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.ಸುಮಾರು 6ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ವಿಶೇಷ ವರದಿಗಳ ಮೂಲಕ ತಾಲೂಕಿನ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಬೆಳಕು ಚೆಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 