ಜಿಲ್ಲಾಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ ಆಯ್ಕೆ
Mallikarjuna Shivacharya elected as District President
ಬೆಳಗಾವಿ, 25 ; ಅಖಿಲಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾ ಘಟಕ ಬೆಳಗಾವಿಯ ಅಧ್ಯಕ್ಷರಾಗಿದ್ದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ನಿಮಿತ್ತ ತೆರುವಾದ ಸ್ಥಾನಕ್ಕೆ ಸವದತ್ತಿ ಮೂಲಿಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಮುತ್ನಾಳದ ಶಿವಾನಂದ ಶಿವಾಚಾರ್ಯರು, ಬಾಗೋಜಿಕೊಪ್ಪ ಕಣ್ಣೂರು ಹಿರೇಮುನ್ನವಳ್ಳಿ ಹಂಚಿನಾಳ ನೂಲ ಉಳ್ಳಾಗಡ್ಡಿ ಖಾನಾಪುರ ಶ್ರೀಗಳನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮಹಾಪೋಷಕರನ್ನಾಗಿ ಎಂ.ಚಂದ್ರಗಿಯ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಭೂತರಾಮನಹಟ್ಟಿಯ ಶಿವಸಿದ್ಧ ಶಿವಾಚಾರ್ಯ ಸ್ವಾಮೀಜಿ ಅವರನ್ನು, ಹಣಬರಹಟ್ಟಿಯ ಬಸವಲಿಂಗ ಶಿವಾಚಾರ್ಯ ಸ್ವಾಮೀಜಿ, ಕಿಲ್ಲಾತೋರಗಲ್ಲ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ, ಉಳ್ಳಾಗಡ್ಡಿ ಖಾನಾಪುರದ ಶ್ರೀ ಸಿದ್ದೇಶ್ವರ ಶಿವಾಚಾರ್ಯರು ಸ್ವಾಮೀಜಿ, ಬಣ್ಣೂರು ಚಿಕ್ಕಮಠದ ಶ್ರೀಗಳನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಗಳನ್ನಾಗಿ ಕಬ್ಬೂರು ರೇವಣ್ಣಸಿದ್ದ ಸ್ವಾಮೀಜಿ, ಸಹಕಾರ್ಯದರ್ಶಿಯಾಗಿ ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಪಾಶ್ಚಾಪುರದ ವಿಶ್ವಾರಾಧ್ಯ ಶಿವಾಚಾರ್ಯ, ಬಿಚ್ಚಗುಪ್ಪಿಯ ಶಿವಯೋಗಿ ಶಿವಾಚಾರ್ಯರು ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಮಮದಾಪುರ ಚರಮೂರ್ತಿಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಯಿತು. ಬೆಳಗಾವಿ ಜಿಲ್ಲೆಯ ಸುಮಾರು 40 ಶಿವಾಚಾರ್ಯರನ್ನು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೋಟ್,,, ಪ್ರತಿಯೊಂದು ಊರುಗಳಲ್ಲಿ ಹಿರೇಮಠ ಪಟ್ಟಾಧ್ಯಕ್ಷರ ಮಠಗಳು ಇರುತ್ತವೆ. ಎಲ್ಲಾ ಶಿವಾಚಾರ್ಯರು ವೀರಶೈವ ಲಿಂಗಾಯತ ಪರಂಪರೆಯನ್ನು ಉಳಿಸಿ, ಬೆಳೆಸುವಲ್ಲಿ ಸಹಕರಿಸುತ್ತಿದ್ದಾರೆ. ನೂತನ ಜಿಲ್ಲಾಧ್ಯಕ್ಷರು ಇನ್ನೂ ಹೆಚ್ಚಿನ ಕಾರ್ಯ ಮಾಡಲಿ. - ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹುಕ್ಕೇರಿ, ರಾಷ್ಟ್ರೀಯ ಉಪಾಧ್ಯಕ್ಷರು, ಅಭಾವಿಶಿ ಸಂಸ್ಥೆ ಬೆಂಗಳೂರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 