ಬೆಳಗಾವಿ : ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಲೂಟಿ ಮಾಡಿದ್ದ ದರೋಡೆಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಸ್ವಾಗತ ಢಾಪಳೆಯನ್ನು ಈ ಪ್ರಕರದಲ್ಲಿ ಉದ್ಯಮಭಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜನವರಿ 27ರಂದು ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಕ್ರಾಸ್‌ನಲ್ಲಿ ಒಂಟಿ ಮಹಿಳೆ ಇದ್ದ ಮನೆಯೊಂದಕ್ಕೆ ನುಗ್ಗಿದ್ದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು.
ಬಂಧಿತ ದರೋಡೆಕೋರನಿಂದ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಹೀರೋ ಹೋಂಡಾ ಪ್ಯಾಶನ್ ಪ್ಲಸ್ ಬೈಕ್ ಜಪ್ತಿ ಮಾಡಲಾಗಿದೆ.
ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.