ಮಣ್ಣಿನಡಿ ಸಿಲುಕಿ ಮೃತ: ಶಾಸಕರಿಂದ 2ಲಕ್ಷ ಪರಿಹಾರ
Man dies after being trapped under mud: MLA offers Rs 2 lakh compensation
ಹಾನಗಲ್ 29: ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಸ್ಟುವರ್ಟ್ ಹಿಲ್ ಎಂಬ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸುವ ಉದ್ದೇಶದಿಂದ ಪಾಯ ಅಗೆಯುತ್ತಿದ್ದ ಸಂದರ್ಭದಲ್ಲಿ ತಾಲೂಕಿನ ಶೃಂಗೇರಿ ಗ್ರಾಮದ ಆನಂದ ಮಲಗುಂದ ಎಂಬ ಕಾರ್ಮಿಕ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಮೂಲತಃ ಹಾನಗಲ್ ತಾಲೂಕಿನ ಶೃಂಗೇರಿ ಗ್ರಾಮದ ಕಾರ್ಮಿಕ ಆನಂದ ಮಲಗುಂದ ಕೆಲಸ ಅರಸಿ ಮಡಿಕೇರಿಗೆ ತೆರಳಿದ್ದರು. ಅಲ್ಲಿ ದುರ್ಘಟನೆ ಸಂಭವಿಸಿ ಮೃತಪಟ್ಟಿದ್ದರು.ಮೃತ ಕಾರ್ಮಿಕನ ತಾಯಿ ಹಿರಗವ್ವ ಬಸಪ್ಪ ಮಲಗುಂದ ಅವರಿಗೆ ಶಾಸಕ ಮಾನೆ ಪರಿಹಾರದ ಚೆಕ್ ಹಸ್ತಾಂತರಿಸಿದರು. ತಹಶೀಲ್ದಾರ್ ರೇಣುಕಾ ಎಸ್. ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 