ವರ್ತಮಾನದ ನಿರ್ವಹಣೆ ಮತ್ತು ಉತ್ತಮ ಭವಿಷ್ಯದ ನಿರ್ಮಾಣವೇ ನಿಜವಾದ ಶಿಕ್ಷಣ
Managing the present and building a better future is true education
ಲೋಕದರ್ಶನ ವರದಿ
ಕಾಗವಾಡ 18 : ವಿದ್ಯಾರ್ಥಿ ಜೀವನವು ಭವಿಷ್ಯವನ್ನು ರೂಪಿಸುವ ಸುವರ್ಣ ಅವಕಾಶವಾಗಿದೆ. ಭವಿಷ್ಯವನ್ನು ಹೇಗೆ ನಿರ್ಮಾಣ ಮಾಡಬೇಕು ಮತ್ತು ವರ್ತಮಾನವನ್ನು ಹೇಗೆ ನಿರ್ವಹಿಸಬೇಕೆಂಬುದನ್ನು ಕಲಿಯುವುದೇ ನಿಜವಾದ ಶಿಕ್ಷಣವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಆಲೋಚನೆಗಳೊಂದಿಗೆ ಓದುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ನೇಜ್ನ ಖ್ಯಾತ ವಾಗ್ನಿ ವೀರೇಶ ಪಾಟೀಲ ತಿಳಿಸಿದ್ದಾರೆ.
ಅವರು, ಶನಿವಾರ ದಿ. 18 ರಂದು ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಮಹಾವಿದ್ಯಾಲಯದ ಪ್ರಥಮ ಪಿಯುಸಿ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಪದವಿಪೂರ್ವ ಮತ್ತು ಪದವಿ ಓದುವ ಅವಧಿಯಲ್ಲಿ ತಾವು ತಗೆದುಕೊಳ್ಳುವ ತಿರ್ಮಾಣಗಳು, ವರ್ತನೆಗಳು ಮತ್ತು ಆಲೋಚನೆಗಳು ನಿಮ್ಮ ಭವಿಷ್ಯದ ಭದ್ರತೆಯ ಮೇಲೆ ತುಂಬಾ ಪರಿಣಾಮ ಬೀರುತ್ತವೆ. ನಾಳೆ ನಾವು ಏನು ಆಗಬೇಕೆಂಬುದು ಈಗ ನಾವು ಏನು ಮಾಡುತ್ತೇವೆ ಅನ್ನುವದರ ಮೇಲೆ ತಿರ್ಮಾನಗೊಳ್ಳುತ್ತದೆ. ಆದ್ದರಿಂದ ಚನ್ನಾಗಿ ಓದಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 