ಮಂದಾರ ಎನ್.ಟಿ.ಸಿ. ಕಾಲೇಜು ಪ್ರಾರಂಭೋತ್ಸವ
Mandara N.T.C. College Inauguration Ceremony
ಬೀಳಗಿ 25: ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಜವಾಬ್ದಾರಿಯನ್ನೂ ಕಲಿಸಬೇಕು ಎಂದು ಮಂದಾರ ಎನ್.ಟಿ.ಸಿ. ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಕೆ.ಎಸ್. ಸೋಮನಕಟ್ಟಿ ಹೇಳಿದರು. ಬೀಳಗಿಯಲ್ಲಿ ನಡೆದ ಮಂದಾರ ಎನ್.ಟಿ.ಸಿ. ಕಾಲೇಜಿನ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಅವರು, ಗುಣಮಟ್ಟದ ಪ್ರಾಥಮಿಕ ಶಿಕ್ಷಣಕ್ಕೆ ತರಬೇತಿ ಪಡೆದ ಶಿಕ್ಷಕರ ಕೊಡುಗೆ ಮಹತ್ವದ್ದಾಗಿದೆ. ಶಿಕ್ಷಕರು ಮಕ್ಕಳಲ್ಲಿ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಕಾಳಜಿ ಹೊಂದಿರಬೇಕು. ವಿಷಯ ಜ್ಞಾನದ ಜೊತೆಗೆ ಮಕ್ಕಳ ಮನೋಭಾವ ಅರ್ಥಮಾಡಿಕೊಳ್ಳುವ ಸಾಮರ್ಥ್ಯ, ಸಂವಹನ ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರಾಚಾರ್ಯೆ ಸುಮಾ ಸೋಮನಕಟ್ಟಿ ಮಾತನಾಡಿ, ಎನ್.ಟಿ.ಸಿ. ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲದೊಂದಿಗೆ ಉತ್ತಮ ಬೋಧನಾ ವಿಧಾನಗಳ ಪರಿಚಯ ಮಾಡಿಕೊಡುವುದು ಸಂಸ್ಥೆಯ ಉದ್ದೇಶವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕರ ತರಬೇತಿ ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದರು. ಮಂದಾರ ಎನ್.ಟಿ.ಸಿ. ಕಾಲೇಜಿನ ಆರಂಭವು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳಿಗೆ ಮುನ್ನುಡಿಯಾಗಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಶಿಕ್ಷಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಶಿವಕುಮಾರ ಬೆಳವಲ, ಮಹೇಶ ಕೋಟಿ, ಮಹಾಂತೇಶ ಕಟಗೇರಿ, ಧರ್ಮಣ್ಣ ಮಂಗಳೂರ, ಸಂಗಮೇಶ ಶಾಂತಗೆರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 