ಮಂಗಳೂರು, ಜನವರಿ 21, ಇದೇ 27 ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಬೆಂಬಲಿಸುವ ಉದ್ದೇಶಿತ ಬೃಹತ್ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಳ್ಳುವ ಸಾಧ್ಯತೆಯಿದೆ. ಜಿಲ್ಲಾ ಬಿಜೆಪಿ ಘಟಕವು ಆಯೋಜಿಸುತ್ತಿರುವ ಈ ಕಾರ್ಯಕ್ರಮ ಕುಲೂರ್‌ನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಬರದಿಂದ ಸಾಗಿದೆ .ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಭಾಷಣಕಾರರಾಗಿ ಇದೆ 19 ರಂದು ಸಭೆಯಲ್ಲಿ ಭಾಗವಹಿಸಬೇಕಿತ್ತು.ಆದರೆ ಗೃಹ ಸಚಿವರು ಆ ದಿನ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಮಂಗಳೂರಿನ ಉದ್ದೇಶಿತ ಕಾರ್ಯಕ್ರಮ ಮುಂದೂಡಬೇಕಾಗಿತ್ತು.