ಬೆಳಗಾವಿ 15: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿ. 15 ಶನಿವಾರದಂದು ನಡೆಯಿತು.
ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮೇಯರ್ ಆಗಿ 41ನೇ ವಾರ್ಡಿನ ಸದಸ್ಯರಾದ ಮಂಗೇಶ ಪವಾರ್ ಹಾಗೂ ಉಪಮೇಯರ್ ಆಗಿ 43ನೇ ವಾರ್ಡಿನ ವಾಣಿ ಜೋಶಿ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆಯಲ್ಲಿ ತನ್ನ ಪ್ರಭುತ್ವ ಸಾಧಿಸಿತು.
ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಮಂಗೇಶ ಪವಾರ್, ರಾಜು ಭಾತಕಾಂಡೆ, ಎಂಇಎಸ್‌ನ ಬಸವರಾಜ ಮಾರುತಿ ಮೋದಗೇಕರ, ಎಐಎಂಐಎಂನ ಶಾಹಿದಖಾನ್ ಪಠಾನ ತಲಾ ಎರಡು ನಾಮಪತ್ರ ಸಲ್ಲಿಸಿದ್ದರು. ಬಳಿಕ ರಾಜು ಭಾತಕಾಂಡೆ ಹಾಗೂ ಶಾಹಿದಖಾನ್ ಪಠಾನ ಉಮೇದುವಾರಿಕೆ ವಾಪಸ್ ಪಡೆದರು. ಮಂಗೇಶ ಹಾಗೂ ಬಸವರಾಜ ಮಧ್ಯೆ ಚುನಾವಣೆ ನಡೆಯಿತು. ಮಂಗೇಶ ಪರವಾಗಿ 40 ವಿರುದ್ಧವಾಗಿ 5 ಮತಗಳು ಚಲಾವಣೆಯಾದವು.
ಉಪಮೇಯರ್ ಸ್ಥಾನಕ್ಕೆ ವಾಣಿ ವಿಲಾಸ ಜೋಶಿ, ದೀಪಾಲಿ, ಖುರ್ಷಿದ್ ಮುಲ್ಲಾ, ಲಕ್ಷ್ಮೀ ಲೋಕರಿ ತಲಾ 2 ನಾಮಪತ್ರ ಸಲ್ಲಿಸಿದ್ದರು. ಖುರ್ಷಿದ್ ಮುಲ್ಲಾ ಹಾಗೂ ದೀಪಾಲಿ ಉಮೇದುವಾರಿಕೆ ವಾಪಸ್ ಪಡೆದರು. ಕಣದಲ್ಲಿ ಉಳಿದ ವಾಣಿ ವಿಲಾಸ ಜೋಶಿ ಪರವಾಗಿ 19 ಮತಗಳು ಚಲಾವಣೆಯಾದವು.