ಮನ್ ಕಿ ಬಾತ್, ಪ್ರಧಾನಿ ದೇಶದ ಜನರೊಂದಿಗೆ ನಡೆಸುವ ಸಂವಾದ:ಯಡಿಯಾಪುರ
Mann Ki Baat, the Prime Minister's interaction with the people of the country: Yediyurappa
ದೇವರಹಿಪ್ಪರಗಿ 29: ಮನ್ ಕಿ ಬಾತ್ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ ಎಂದು ಯಾದಗಿರಿ ಜಿ.ಪಂ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ (ಯಡಿಯಾಪೂರ) ಹೇಳಿದರು.ಪಟ್ಟಣದ ಜಡಿ ಮಠದ ಆವರಣದಲ್ಲಿ ಶ್ರೀ ಮಠದ ದ್ವಾರ ಬಾಗಿಲು ಕಟ್ಟಡದ ಸ್ಥಳ ಮತ್ತು ಶ್ರೀಗಳ ಜೊತೆ ಮನ್ ಕಿ ಬಾತ್ ವಿಕ್ಷಣೆ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿ ತಿಂಗಳು ಕೊನೆಯ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕೇಳಲು ಎಲ್ಲರೂ ಕಾತುರದಿಂದ ಕಾಯುತ್ತಿರುತ್ತಾರೆ, ಹೊಸ ವಿಷಯಗಳ ಕುರಿತು ಚರ್ಚೆ ಏನಿರಬಹುದು ಎನ್ನುವ ಕುತೂಹಲ ಪ್ರತಿಯೊಬ್ಬರಲ್ಲಿರುತ್ತದೆ.ಆತ್ಮನಿರ್ಭರ ಭಾರತವನ್ನು ನಿರ್ಮಿಸುವ ಸೇರಿದಂತೆ ವೈವಿಧ್ಯಮಯ ವಿಷಯಗಳನ್ನು ಈ ಕಾರ್ಯಕ್ರಮದಲ್ಲಿ ಇರುತ್ತದೆ.
ಮನ್ ಕಿ ಬಾತ್ ಕೇವಲ ಒಂದು ರೇಡಿಯೋ ಕಾರ್ಯಕ್ರಮವಲ್ಲ, ಇದು ರಾಷ್ಟ್ರ ಮೊದಲು ಎಂಬ ಭಾವನೆಯನ್ನು ಬಿಂಬಿಸುವ ಒಂದು ನಂಬಿಕೆ, ಈ ಕಾರ್ಯಕ್ರಮವನ್ನು ದೇಶದ ಪ್ರತಿಯೊಬ್ಬ ಬೂತ್ ಮಟ್ಟದ ಕಾರ್ಯಕರ್ತರು ವೀಕ್ಷಣೆ ಮಾಡುತ್ತಾರೆ. ಈ ಬಾರಿ ಶ್ರೀಗಳ ಜೊತೆ ಮಠದಲ್ಲಿ ವೀಕ್ಷಣೆ ಮಾಡುವ ಮೂಲಕ ದೇಶದ ಪ್ರಧಾನಿಯವರಿಗೆ ಧನ್ಯವಾದಗಳು ಸಲ್ಲಿಸುತ್ತೇನೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿಯವರು ಹಗಲಿರುಳು ದುಡಿಯುತ್ತಿದ್ದಾರೆ. ನಾವೆಲ್ಲರೂ ಅವರಿಗೆ ಬೆಂಬಲ ಸೂಚಿಸೋಣ ಎಂದು ಹೇಳಿದರು. ಸಂದರ್ಭದಲ್ಲಿ ಜಡಿ ಮಠದ ಶ್ರೀ ಜಡಿ ಸಿದ್ದೇಶ್ವರ ಶಿವಾಚಾರ್ಯರು ಕಾರ್ಯಕ್ರಮ ವೀಕ್ಷಿಸಿ ಶುಭಾಶಯ ತಿಳಿಸಿದರು. ಇದೇ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಶಾಂತಯ್ಯ ಜಡಿಮಠ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 