ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಶಕ್ತಿ ಜೊತೆಗೆ ಅನೇಕ ಬದಲಾವಣೆ
Many changes along with financial strength from the guarantee scheme
ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಶಕ್ತಿ ಜೊತೆಗೆ ಅನೇಕ ಬದಲಾವಣೆ
ಹಾವೇರಿ 10 : ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆ ಜೊತೆಗೆ ಅನೇಕ ಬದಲಾವಣೆಗಳಾಗಿವೆ. ಸಾಮಾನ್ಯ ಆದಾಯ ರೂ.ಒಂದು ಲಕ್ಷದಿಂದ ರೂ.ಎರಡು ಲಕ್ಷದವರೆಗೆ ಹೆಚ್ಚಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೂದವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಸರ್ಕಾರ ಜಾರಿಗೆ ತಂದ, ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿಗೆ ಆತ್ಮಬಲ ಬಂದಿದೆ.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು ಮಳಿಗೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಡಿ.ದೇವರಾಜ ಅರಸು ಅವರಿಂದ ಹಿಡಿದು ಈವರೆಗ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯು ಘನತೆ-ಗೌರವದಿಂದ ಬದುಕುವಂತಾಗಿದೆ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಿದೆ. ಇವು ಬಿಟ್ಟಿಭಾಗ್ಯ ವಲ್ಲ, ಈ ಯೋಜನೆಗಳಿಂದ ಬಡ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಿಂದ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.
ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ.ಬಣಕಾರ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರಲ್ಲಿ ಉತ್ಸಾಹ ಹಾಗೂ ಖುಷಿ ತರುವ ಯೋಜನೆಗಳಾಗಿವೆ. ಈ ಯೋಜನೆಯಿಂದ ವಾರ್ಷಿಕ ರೂ.55 ರಿಂದ 58 ಸಾವಿರ ಒಂದು ಕುಟುಂಬಕ್ಕೆ ಆರ್ಥಿಕ ನೆರವು ದೊರೆಯುತ್ತಿದೆ. ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ. ಇದರಿಂದ ಕುಟುಂಬದ ನಿರ್ವಹಣೆಗೆ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನೇಕರು ಟೀಕಿಸುತ್ತಿದ್ದಾರೆ ಹಾಗೂ ಈ ಯೋಜನೆಗಳನ್ನು ಬಂದ್ ಮಾಡಲು ಪಿತೂರಿ ಮಾಡುತ್ತಿದ್ದಾರೆ. ಆದರೆ ಈ ಯೋಜನೆಗಳು ಸೂರ್ಯ ಚಂದ್ರರಿರುವರೆಗೆ ಶಾಶ್ವತವಾಗಿರುತ್ತವೆ. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸೌಹಾರ್ದತೆ ಕಾಪಾಡಲು ಎಲ್ಲರೂ ನಮ್ಮ ಜೊತೆ ಕೈಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಯಾಸೀರ ಅಹ್ಮದಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾವೇರಿ ತಾಲೂಕಾ ಅಧ್ಯಕ್ಷ ಮಹಾದೇವರಡ್ಡಿ. ಎಂ.ಮೈದೂರ, ಹಾನಗಲ್ ತಾಲೂಕಾ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಬ್ಯಾಡಗಿ ತಾಲೂಕಾ ಅಧ್ಯಕ್ಷ ಶಂಬನಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 