ಗದಗ 24: ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮ ವಷರ್ಾಚರಣೆ ಅಂಗವಾಗಿ ಗದಗ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆ ಹಾಗೂ 122 ಗ್ರಾ. ಪಂ. ವ್ಯಾಪ್ತಿಯಲ್ಲಿ ಸ್ಥಳೀಯ ಆಡಳಿತಗಳ ಜೊತೆಗೆ ವಿದ್ಯಾರ್ಥಿಗಳು, ಯುವಜನರು, ಎಲ್ಲ ಸಾರ್ವಜನಿಕರು ಸಹಕರಿಸಿ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಆನಂದ ಕೆ. ಮನವಿ ಮಾಡಿದರು.
ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿರುವ ಅಬಿಯಾನದ ಸಭೆಯಲ್ಲಿ ಅವರುಗಳು ಮಾತನಾಡಿದರು. 2-10-2019 ರಂದು ಮುಂಜಾನೆ 8 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು. ತದನಂತರ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ತಮ್ಮ ವ್ಯಾಪ್ತಿಯ ಎಲ್ಲ ಒಂಬತ್ತು ಸ್ಥಳೀಯ ಸಂಸ್ಥೆಗಳಲ್ಲಿ ಶೀಘ್ರವೇ ಜನಜಾಗೃತಿ ಮೂಲಕ ಆಯಾ ಪಟ್ಟಣ ಪ್ರದೇಶ ವ್ಯಾಪ್ತಿಯ ಎಲ್ಲ ಪ್ಲಾಸ್ಟಿಕ್ ಸಂಗ್ರಹವನ್ನು ಒಂದೆಡೆ ಶೇಖರಿಸುವ ಕ್ರಮ ಜರುಗಿಸಬೇಕು. ಅದೇ ರೀತಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಜಿಲ್ಲೆಯ 616 ಪ್ರಾಥಮಿಕ ಹಾಗೂ 286 ಪ್ರೌಢಶಾಲೆ , 114 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವರ ಪಾಲಕರಿಗೆ ಜಾಗೃತಿ ಮೂಡಿಸುವ ಮೂಲಕ ಅವುಗಳ ವ್ಯಾಪ್ತಿಯಲ್ಲಿನ ಪ್ಲಾಸ್ಟಿಕ್ ಸಂಗ್ರಹಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 1166 ಅಂಗನವಾಡಿಗಳ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ಸಂಗ್ರಹಣೆಗೆ ಆಯಾ ಇಲಾಖೆಯ ಜಿಲ್ಲಾ , ತಾಲೂಕಾ ಅಧಿಕಾರಿಗಳು ಕಾರ್ಯಕ್ರಮ ರೂಪಿಸಿ ಜನಜಾಗೃತಿ ಮೂಡಿಸಿ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸಲು ಇಂದಿನಿಂದಲೇ ಗಂಭೀರವಾಗಿ ತೆಗೆದುಕೊಂಡು ಕಡ್ಡಾಯವಾಗಿ ಅಗತ್ಯದ ಕ್ರಮ ಜರುಗಿಸಲು ನಿರ್ದೇಶನ ನೀಡಿದರು.
ಗದಗ ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಆನಂದ್ ಕೆ ಅವರು ಜಿಲ್ಲೆಯ ಎಲ್ಲ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲ 122 ಗ್ರಾ. ಪಂ. ಗಳ ಪಿಡಿ ಓಗಳು, ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತಂತೆ ಜನಜಾಗೃತಿ ಮೂಡಿಸಲು ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ಲಾಸ್ಟಿಕ್ ನ್ನು ಒಂದೆಡೆ ಶೇಖರಿಸಲು ಕ್ರಮ ವಹಿಸಬೇಕು. ಈ ಕುರಿತು ಕಾರ್ಯಕ್ರಮ ಜರುಗಿಸಬೇಕು. ಅಕ್ಟೋಬರ್ 2 ರಂದು ತಮ್ಮ ಕಚೇರಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿ ಹಾಗೂ ಗ್ರಾಮಸ್ಥರರು ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆ ಸರಳವಾಗಿ ಆಯೋಜಿಸಿ ವರದಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಅವರು ಮಾತನಾಡಿ ಗದಗ ಪೌರಾಯುಕ್ತರು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ವಾರ್ಡವಾರು ಜಾಗೃತಿ ಕಾರ್ಯಕ್ರಮ ಆಯೋಜಿಸಬೆಕು. ಶೀಘ್ರವೇ ತಮ್ಮ ವ್ಯಾಪ್ತಿಯ ವ್ಯಾಪಾರಿಗಳ, ಅವರ ವಿವಿಧ ಸಂಘಗಳ ಸಭೆ ಕರೆದು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಕುರಿತಂತೆ ಮಾಹಿತಿ ನೀಡಿ ಅವರುಗಳು ವ್ಯಾಪಾರ ಸಂದರ್ಭದಲ್ಲಿ ಯಾವುದೇ ಕಾರಣಕ್ಕೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಬೇಕು ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ ಮುಧೋಳ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ, ಪದವಿ ಪೂರ್ವ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.