ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ


ಪುಣೆ 30: ಸಕರ್ಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಚಕನ್ ಪಟ್ಟಣದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಪ್ರತಿಭಟನಾನಿರತ 35 ವರ್ಷದ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ನಂತರ ಚಕನ್ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿಮರ್ಾಣವಾಗಿದ್ದು, ಕಲ್ಲು ತೂರಾಟ, ಹಲವು ಸಕರ್ಾರಿ ಬಸ್ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ. 

ಕಲ್ಲು ತೂರಾಟದಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ ಜೈಸಿಂಗ್ ಹೊರೆ ಅವರು ಮರಾಠ ಮೀಸಲಾತಿ ಬೇಡಿಕೆ ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿನ್ನೆಯೇ ತಮ್ಮ ಫೇಸ್ ಬುಕ್ ಮತ್ತು ವಾಟ್ಸ್ ಆಪ್ ನಲ್ಲಿ ಸಂದೇಶ ಹಾಕಿದ್ದರು ಎಂದು ಮುಕುಂದವಾಡಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ನಾಥ ಜಾಧವ್ ಅವರು ಪಿಟಿಐಗೆ ತಿಳಿಸಿದ್ದಾರೆ. 

ಮೀಸಲಾತಿಗೆ ಒತ್ತಾಯಿಸಿ ಕೆಲವು ಮರಾಠ ಸಂಘಟನೆಗಳು ಇಂದು ಚಕನ್ ಬಂದ್ ಗೆ ಕರೆ ನೀಡಿದ್ದವು. 

ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.