ಅ.31 ರಂದು ಮ್ಯಾರಥಾನ್ ಓಟ
Marathon race on October 31st
ಬಳ್ಳಾರಿ,ಅ.28: ಭಾರತ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾರತದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ವಾರ್ಷಿಕೋತ್ಸವದ ನಿಮಿತ್ತ ರಾಷ್ಟ್ರೀಯ ಐಕ್ಯತಾ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅ.31 ರಂದು ಬೆಳಿಗ್ಗೆ 07 ಗಂಟೆಗೆ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ರನ್-ಫಾರ್-ಯುನಿಟಿ (ಏಕತೆಗಾಗಿ ಓಟ) ಮ್ಯಾರಥಾನ್ ಓಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಓಟವು ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭಗೊಂಡು ಇಂದಿರಾ ವೃತ್ತ- ನೂತನ ಜಿಲ್ಲಾಡಳಿತ ಭವನ- ಎಂ.ಜಿ ರಸ್ತೆ- ಅನಂತಪುರ ಬೈಪಾಸ್ ಕ್ರಾಸ್ ನಿಂದ ಮರಳಿ ಎಂ.ಜಿ ವೃತ್ತ- ಇಂದಿರಾ ವೃತ್ತ- ಎಸ್.ಎನ್.ಪೇಟೆ ಕ್ರಾಸ್(ಕೂಲ್ ಕಾರ್ನರ್)- ಡಿಎಆರ್ ಪೊಲೀಸ್ ಕವಾಯತು ಮೈದಾನದವರೆಗೆ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 