ಮಾ.9ರಂದು ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ

ಮಾ.9ರಂದು ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ March 9th marks the birth anniversary of Adi Jagadguru Renukacharya

ಕಂಪ್ಲಿ 07:  ವೀರಶೈವ ಧರ್ಮ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ  ಜಯಂತಿಯನ್ನು ಮಾರ್ಚ್‌ 9ರಂದು ಕಂಪ್ಲಿ ಪಟ್ಟಣದಲ್ಲಿ ಆಚರಿಸಲಾಗುತ್ತದೆ ಎಂದು ಕಂಪ್ಲಿ ತಾಲ್ಲೂಕು ವೀರಶೈವ ಸಂಘದ ಪ್ರಕಟಣೆ ತಿಳಿಸಿದೆ. ಪಂಚಲೋಹದ ಆದಿ ಜಗದ್ಗುರು ಶ್ರೀರೇಣುಕಾಚಾರ್ಯರ ಮೂರ್ತಿಯ ಮೆರವಣಿಗೆಯನ್ನು ವೀರಶೈವ ಸಂಘದ ಶಾಲಾವರಣದಿಂದ ಮುತೈದೆಯರ ಕಳಸ ಕನ್ನಡಿ ಸಕಲ ಮಂಗಳ ವಾದ್ಯಗಳು, ವಿವಿಧ ಜಾನಪದ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಮುಕ್ತಾಯಗೊಳ್ಳಲಿದೆ. 

ನಂತರ ಧರ್ಮಸಭೆ ನಡೆಯಲಿದ್ದು, ಶ್ರೀಧರಗಡ್ಡೆ  ಜಗದ್ಗುರು ಕೊಟ್ಟೂರು ಸ್ವಾಮಿ ಶಾಖ ವಿರಕ್ತ ಮಠದ ಪೂಜ್ಯ ಶ್ರೀ ಮರಿ ಕೊಟ್ಟೂರು ದೇವರು ದಿವ್ಯ ಸಾನಿಧ್ಯ ವಹಿಸಿ ಆರ್ಶೀವಚನ ನೀಡಲಿದ್ದಾರೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮಗಳ ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.