ನವದೆಹಲಿ, ಮೇ 15,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾನ್ ಕ್ರಾಂತಿಕಾರಿ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ ಸುಖದೇವ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ್ದಾರೆ "ಶಹೀದ್ ಸುಖದೇವ್ ಅವರ ಜನ್ಮ ದಿನಾಚರಣೆಯಂದು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರನ ಧೈರ್ಯ ಮತ್ತು ದೃಢ ನಿಶ್ಚಯವನ್ನು ಅನುಷ್ಠಾನಗೊಳಿಸೋಣ" ಎಂದು ಟ್ವೀಟ್ ಮಾಡಿದ್ದಾರೆ ಶಹೀದ್ ಸುಖದೇವ್ ಥಾಪರ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂಸ್ತಾನ್ ಸಮಾಜವಾದಿ ರಿಪಬ್ಲಿಕನ್ ಸಂಘದ ಹಿರಿಯ ಸದಸ್ಯರಾಗಿದ್ದರು. ಅವರು ಭಗತ್ ಸಿಂಗ್ ಮತ್ತು ಶಿವರಾಮ್ ರಾಜ್ ಗುರು ಅವರೊಂದಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಹಲವಾರು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.ಬ್ರಿಟಿಷ್ ಅಧಿಕಾರಿಗಳು 1931 ಮಾರ್ಚ್ 23 ರಂದು ಸುಖದೇವ್ ಅವರನ್ನು ಗಲ್ಲಿಗೇರಿಸಿದರು. ಆಗ ಅವರಿಗೆ ಕೇವಲ 23ವರ್ಷ ವಯಸ್ಸಾಗಿತ್ತು.