ಹುತಾತ್ಮರ ದಿನಾಚರಣೆ
Martyrs' Day
ಕೊಪ್ಪಳ 30: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಇಂದು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಲಪತಿಗಳಾದ (ಪ್ರಭಾರ) ಪ್ರೊ.ಎಸ್.ವಿ.ಡಾಣಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಹಾದಿಯಲ್ಲಿ ಯುವಪೀಳಿಗೆ ಮುನ್ನಡೆಯಬೇಕು ಎಂದು ಹಿತ ನುಡಿಗಳನ್ನಾಡಿದರು. ಕುಲಸಚಿವರಾದ ಪ್ರೊ.ಕೆ.ರಮೇಶ್ ಅವರು, ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ನೆನೆಯುತ್ತಾ ಮೌಲ್ಯಯುತ ಮಾತುಗಳನ್ನು ಸ್ಮರಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಅಧಿಕಾರಿಗಳಾದ ತಿಮ್ಮಾರೆಡ್ಡಿ ಮೇಟಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರನ್ನು ನೆನೆಯುತ್ತಾ ಅವರ ತ್ಯಾಗ ಬಲಿದಾನವನ್ನು ಕುರಿತು ಮಾತನಾಡಿದರು. ಅತಿಥಿ ಉಪನ್ಯಾಸಕರಾದ ಡಾ.ವೀರೇಶ್ ಉತ್ತಂಗಿ ನಿರೂಪಿಸಿದರು.ಕೆ.ಶಂಕರ್ ವಂದಿಸಿದರು. ಈ ವೇಳೆ ವಿಶ್ವವಿದ್ಯಾಲಯದ ಬೋದಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದು, ಮೌನಾಚರಣೆಯನ್ನು ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 