ಅದ್ದೂರಿಯಾಗಿ ನೆರವೇರಿದ ಮರುಳಸಿದ್ದೇಶ್ವರ ಪಲ್ಲಕ್ಕಿ ಉತ್ಸವ
Marulasiddeshwara Palanquin Festival Celebrated Grandly
ತಡವಲಗಾ 09: ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಮರುಳಸಿದ್ದೇಶ್ವರ ಪಲ್ಲಕ್ಕಿ ಉತ್ಸವವು ಅದ್ದೂರಿಯಾಗಿ ನೆರವೇರಿತು. ಅಭಿನವ ರಾಚೋಟೇಶ್ವರ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ಸಂಜೆ 4 ಗಂಟೆಗೆ ಆರಂಭವಾದ ಪಲ್ಲಕ್ಕಿ ಉತ್ಸವವು ವಾದ್ಯವೃಂದ, ಸಂಗೀತ, ನೃತ್ಯ, ಭಜನೆ ಹಾಗೂ ಪುರವಂತರೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜೋಡಗುಡಿ ತಲುಪಿತು. ಉತ್ಸವದ ಸಂದರ್ಭದಲ್ಲಿ ಭಕ್ತರು ಸಾಷ್ಟಾಂಗ ಪ್ರಣಾಮ ಸಲ್ಲಿಸಿ ಭಕ್ತಿ ಮೆರೆದರು. ಮರುಳಸಿದ್ದೇಶ್ವರರು ಮಹಾ ಶಿವಶರಣರಾಗಿ ತಡವಲಗಾದಲ್ಲಿ ನೆಲೆಸಿ ಭಕ್ತರಿಗೆ ಧರ್ಮ ಹಾಗೂ ಶಿವತತ್ವದ ಸಂದೇಶವನ್ನು ಬೋಧಿಸಿದ್ದಾರೆ ಎಂಬ ನಂಬಿಕೆಯಿದೆ. ಗ್ರಾಮಕ್ಕೆ ಸುಖ, ಶಾಂತಿ ಮತ್ತು ನೆಮ್ಮದಿ ಸದಾ ನೆಲೆಸಲಿ ಎಂದು ಭಕ್ತರು ಪ್ರಾರ್ಥಿಸಿದರು. ಜಾತ್ರೆ ಹಾಗೂ ಪಲ್ಲಕ್ಕಿ ಉತ್ಸವವು ಶಾಂತಿಯುತವಾಗಿ ನಡೆಯಲು ಹೋರ್ತಿ ಪೊಲೀಸ್ ಠಾಣೆ ಪಿಎಸ್ಐ ಅನಿತಾ ರಾಠೋಡ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 