ಮಾರುತಿ ಲೋಕೂರ್ ಕಾಂಗ್ರೆಸ್‌ಗೆ ಸೇರೆ​‍್ಡ

ಮಾರುತಿ ಲೋಕೂರ್ ಕಾಂಗ್ರೆಸ್‌ಗೆ ಸೇರೆ​‍್ಡ Maruti Lokur joins Congress

ಬೆಳಗಾವಿ 15  :  ನಂದಿಹಳ್ಳಿಯ ಬಿಜೆಪಿ ಮುಖಂಡ ಮಾರುತಿ ಲೋಕೂರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರುತಿ ಲೋಕೂರ್ ಅವರು ಕಾಂಗ್ರೆಸ್ ಸೇರೆ​‍್ಡಯಾಗಿದ್ದು, ಸಚಿವರು ಕಾಂಗ್ರಸ್ ಶಾಲು ಹಾಕಿ ಸ್ವಾಗತಿಸಿದರು.  

ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕೈ ಬಲಪಡಿಸಬೇಕೆನ್ನುವ ಉದ್ಧೇಶದಿಂದ ಕಾಂಗ್ರೆಸ್ ಸೇರಿದ್ದಾಗಿ ಅವರು ತಿಳಿಸಿದರು. ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದರಿಂದ ಇನ್ನೂ ಹಲವರು ಪಕ್ಷಕ್ಕೆ ಸೇರಲು ಉತ್ಸುಕರಾಗಿದ್ದಾರೆ.  

ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಕಾಡಾ ಅಧ್ಯಕ್ಷ ಯುವರಾಜ ಕದಂ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಶಂಕರಗೌಡ ಪಾಟೀಲ, ಮನೋಹರ ಬೆಳಗಾಂವಕರ್, ಗಾಯತ್ರಿ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಇದ್ದರು.