ಕೊಪ್ಪಳ 14: ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹಗಳ ಕುರಿತು ಜಾಗೃತಿ ಮೂಡಿಸುವ ರಥಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಜಿಲ್ಲಾಡಳಿತ ಭವನದಲ್ಲಿಂದು (ಫೆ.14) ಚಾಲನೆ ನೀಡಿದರು.
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜನ ಸಮಾನ್ಯರ ಅನುಕೂಲಕ್ಕಾಗಿ ``ಸಪ್ತಪದಿ'' ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಏಪ್ರೀಲ್. 26 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಲು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಂಚಾರಿ ವಾಹನದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ವಿವರ: ``ಸಪ್ತಪದಿ'' ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದ ವಿವರ ಇಂತಿದೆ. ಸಾಮೂಹಿಕ ವಿವಾಹವಾಗುವ ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಮತ್ತು ವಧುವಿಗೆ ಅಂದಾಜು 8 ಗ್ರಾಂ. ತೂಕದ ಚಿನ್ನದ ಒಂದು ತಾಳಿ ಎರಡು ಗುಂಡುಗಳನ್ನು ದೇವಾಲಯ ವತಿಯಿಂದ ನೀಡಲಾಗುವುದು. ಅಲ್ಲದೇ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಜೋಡಿಗೆ ಸಮಾಜ ಕಲ್ಯಾಣ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ. 50 ಸಾವಿರಗಳನ್ನು ನೀಡಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರ ಮತ್ತು ಅವರ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಇತರೆ ಅವಶ್ಯಕ ವ್ಯವಸ್ಥೆಗಳನ್ನು ದೇವಾಲಯದಿಂದ ಒದಗಿಸಲಾಗುತ್ತದೆ.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, ಸಕರ್ಾರದ ``ಸಪ್ತಪದಿ'' ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದ ಸದುಪಯೋಗವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಚಾರಿ ವಾಹನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ವಧು-ವರರು ಅಜರ್ಿಗಳನ್ನು ಸಂಬಂಧಿಸಿದ ದೇವಾಲಯ ಕಾರ್ಯನಿವರ್ಾಹಣಾಧಿಕಾರಿಗಳ ಕಛೇರಿಯಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಮಾಚರ್್. 27 ರೊಳಗಾಗಿ ಸಂಬಂಧಿಸಿದ ಕಛೇರಿಗೆ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ 80956789319, 8151016891, 8095292919, 9448336550 ಸಂಪರ್ಕಿಸಬಹುದು ಎಂದರು.
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿವರ್ಾಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.