ಸಾಮೂಹಿಕ ವಿವಾಹ ಜೀವನಕ್ಕೆ ಆದರ್ಶ:ರಮೇಶ ಜಿಗಜಿಣಿಗಿ
Mass marriage is ideal for life: Ramesh Jigajinigi
ಇಂಡಿ 18: ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ. ಇದಕ್ಕಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ. ಸಾಮೂಹಿಕ ವಿವಾಹದಲ್ಲಿ ಸಂಸಾರ ಜೀವನಕ್ಕೆ ಪಾದಾರೆ್ಣ ಆದರ್ಶ. ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗಿ, ಪ್ರಗತಿಗೆ ಪೂರಕವಾಗುತ್ತದೆ. ಇದು, ಕುಟುಂಬಕ್ಕೆ ಮಾತ್ರವಲ್ಲದೇ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಎಂದು ಸಂಸದ ರಮೇಶ ಜಿಗಜಿಣಿಗಿ ಹೇಳಿದರು.
ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ (ಜೋಡಗುಡಿ) ಮರುಳಸಿದ್ದೇಶ್ವರ ಜಾತ್ರೆಯ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಹಾಗೂ ಸರ್ವ-ಧರ್ಮ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮಿತ ಸಂತಾನ, ಮಕ್ಕಳ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಎಂದು ಹೇಳಿದರು.
ಶಾಸಕ ಯಶವಂತರಾಯಗೌಡ ಪಾಟೀಲ ಅವರು ಮಾತನಾಡಿ ತಡವಲಗಾ ಗ್ರಾಮದ ರೈತರು ತುಂಬಾ ಧೈರ್ಯವಂತರು. ರಾಜ್ಯದಲ್ಲಿ ಅತಿ ಹೆಚ್ಚು ನಿಂಬೆ ಹಣ್ಣು ಬೆಳೆಯುವ ಪ್ರದೇಶ ಇಂಡಿ ತಾಲೂಕು ಅದರಲ್ಲಿ ಅತಿ ಹೆಚ್ಚು ನಿಂಬೆ ಬೆಳೆಯುವ ಪ್ರದೇಶ ತಡವಲಗಾ ಗ್ರಾಮ. ಅದೆ ರೀತಿ ಇಲ್ಲಿ ಹದಿನಾಲ್ಕು ನವ ಜೋಡಿಗಳನ್ನು ಉಚಿತ ಮದುವೆ ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.
ದೆಹಲಿ ನಿಕಟಪೂರ್ವ ಪ್ರತಿನಿಧಿ ಶಂಕರಗೌಡ ಪಾಟೀಲ ಅವರು ಮಾತನಾಡಿ ಭಾರತ ಭವ್ಯವಾದ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದ ರಾಷ್ಟ್ರವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಈ ಕಾರ್ಯಕ್ರಮಕ್ಕೆ ನನಗೆ ಕರೆಸಿ ಸನ್ಮಾನಿಸಿ ಗೌರವಿಸಿದ್ದು ತುಂಬಾ ಸಂತೋಷ ತಮಗೆ ತುಂಬಾ ಧನ್ಯವಾದಗಳು ಎಂದು ಹೇಳಿದರು.
ದಿವ್ಯಸಾನಿಧ್ಯ ವಹಿಸಿದ ಕಾಶಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಆಶೀರ್ವಚನ ನೀಡಿ ನವ ವಧುವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೆನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ಎಲ್ಲ ಸತ್ಕಾರ್ಯ ನಡೆಯಲಿ ಎಂದು ಹೇಳಿದರು.
ತಡವಲಗಾ ಗ್ರಾಮದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ನಾಗಠಾಣದ ಮಲ್ಲಿಕಾರ್ಜುನ ಶಿವಾಚಾರ್ಯರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಜಿಗಜಿಣಗಿಯ ಮುಪ್ಪಿನಾರ್ಯ ಶಿವಾಚಾರ್ಯರು ಹಾಗೂ ಮಂಜುನಾಥ ವಂದಾಲ, ನಾಗುಗೌಡ ಪಾಟೀಲ, ಚಂದ್ರಶೇಖರ ಹೂಗಾರ, ಬಾಬುಸಾಹುಕಾರ ಮೇತ್ರಿ, ಬಸವರಾಜ ಇಂಡಿ, ಚಂದ್ರಶೇಖರ ರೂಗಿ, ತಮ್ಮಣ್ಣ ಪೂಜಾರಿ, ಅಣ್ಣಾರಾಯ ಮದರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 