ಸಾಮೂಹಿಕ ವಿವಾಹಗಳಿಂದ ಸಾಮಾಜಿಕ ಸಾಮರಸ್ಯ ಸಾದ್ಯ : ಸಂಗನಬಸವ ಶ್ರೀಗಳು
Mass marriages can achieve social harmony: Sangana Basava
ಲೋಕದರ್ಶನ ವರದಿ
ಶಿಗ್ಗಾವಿ 20: ವಿವಿಧ ಜಾತಿ ಮತ್ತು ಸಮುದಾಯದವರು ಒಂದೇ ವೇದಿಕೆಯಲ್ಲಿ ಮದುವೆಯಾಗುವುದರಿಂದ ಸಾಮಾಜಿಕ ಸಾಮರಸ್ಯ ಮತ್ತು ಸಮಾನತೆ ಮೂಡುತ್ತದೆ ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹಿರೇಮಠದಲ್ಲಿ ಹಮ್ಮಿಕೊಂಡ 17 ನೇ ವರ್ಷದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಂಸ್ಕಾರ ಬದ್ದ ಮಧುವೆಗಳು ಸಾಮೂಹಿಕ ವಿವಾಹಗಳಲ್ಲಿ ಸಾದ್ಯವಿದ್ದು ಹರಗುರು ಚರಮೂರ್ತಿಗಳ ಆಶೀರ್ವಾದ ಸಿಗಲು ಸಾದ್ಯವಾಗುತ್ತದೆ, ದುಂದುವೆಚ್ಚ ಎಂದರೆ ದುರಾಚಾರ ಅದಕ್ಕೆ ಕಡಿವಾಣ ಹಾಕಲು ಸಾದ್ಯವಿದೆ, ಮಧುವೆ ಮಾಡಿಕೊಂಡು ಸಾಲ ಮಾಡಿಕೊಳ್ಳುವವರೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ದುಂದುವೆಚ್ಚ ವಿಲ್ಲದೇ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದರು. ಭಾರತ ಸೇವಾ ಸಂಸ್ಥೆ ಅದ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಕೆಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಗಂಗಣ್ಣ ಸಾತಣ್ಣವರ, ಶಿವಾನಂದ ಮ್ಯಾಗೇರಿ ಮಾತನಾಡಿದರು.
ಹಿರೇಮಣಕಟ್ಟಿ ವಿಶ್ವಾರಾದ್ಯ ಶಿವಾಚಾರ್ಯ, ಗಂಜೀಗಟ್ಟಿ ಶಿವಲಿಂಗೇಶ್ವರ ಶಿವಾಚಾರ್ಯರು, ಅಸೂಟಿಯ ರೇವಣಶಿದ್ದೇಶ್ವರ ಮಹಾಸ್ವಾಮಿಗಳು, ಹಿರೆಂಬೇಂಡಿಗೇರಿ ಹಿರೇಮಠದ ವಿಶ್ವೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿದರು.ಸಾಮೂಹಿಕ ವಿವಾಹದಲ್ಲಿ 10 ಜೋಡಿಗಳು ನವದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಮೌಲಾಸಾಬ್ ತಹಶೀಲ್ದಾರ ಹಾಗೂ ಶಿವಾನಂದ ಮ್ಯಾಗೇರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖಂಡರಾದ ಗುರುನಾಥ ಅಂಚಟಗೇರಿ, ಮೃತ್ಯಂಜಯ ವಡಯರಮಠ, ಅರ್ಜುನ ಹಂಚಿನಮನಿ, ಮಂಜುನಾಥ ಕಾರಡಗಿ, ಮಹೇಶ ಹಿರೇಮಠ, ಎಂ ಎಚ್ ಪಠಾಣ್, ಪಕ್ಕೀರ್ಪ ಸಂಗಣ್ಣವರ, ಧರಯಪ್ಪಗೌಡ್ರ ಪಾಟೀಲ, ವಿಶ್ವನಾಥ ಹರಕುಣಿ, ರಮೇಶ ಸಾತಣ್ಣವರ, ಫಯಾಜ್ ಸವಣೂರ ಸೇರಿದಂತೆ ಹಿರೆಬೆಂಡಿಗೇರಿ ಗ್ರಾಮದ ಮುಖಂಡರು ಹಾಗೂ ಸಾಮೂಹಿಕ ವಿವಾಹಕ್ಕೆ ಆಗಮಿಸಿದ ಸಾರ್ವಜನಿಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 