ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ : ಮೂರ್ತ್ಯಪ್ಪ
Mass marriages will reduce waste: Murthyappa
ಕೊಪ್ಪಳ 28: ಸಾಮೂಹಿಕ ವಿವಾಹ ಕಾರ್ಯಕ್ರಮದಿಂದ ಬಡವರಿಗೆ ತುಂಬಾ ಅನುಕೂಲ ವಾಗುತ್ತದೆ ಇದು ದುಂದು ವೆಚ್ಚಕ್ಕೆ ಕಡಿವಾಣ ಕೂಡ ಹಾಕುವಂತಾಗುತ್ತದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗೆಣಿಗೇರಿ ಹಿಟ್ನಾಳ ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಹಾರೈಸಿದ ಬಳಿಕ ಕಾರ್ಯಕ್ರಮ ಸಂಘಟಕ ರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು,
ಸಾಮೂಹಿಕ ವಿವಾಹ ಕಾರ್ಯಕ್ರಮ ಬಡವರ ಪಾಲಿಗೆ ಸಂಜೀವಿನಿಯಾಗಿದೆ ಇದರಿಂದ ಬಡ ಕುಟುಂಬಗಳಿಗೆ ಬಹಳಷ್ಟು ಅನುಕೂಲ ವಾಗಲಿದೆ ಇಂತಹ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ಹೇಳಿದರು, ಸಮಾರಂಭದಲ್ಲಿ ಶಿವಕುಮಾರ್ ಏಣಿಗಿ ರಮೇಶ್ ಡಠ್ರಳ್ಳಿ ಸೇರಿದಂತೆ ಅನೇಕ ಜನ ಗಣ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 