ಆರ್ಡಿಸಿಸಿ ಬ್ಯಾಂಕ್ ನೇಮಕಾತಿಯಲ್ಲಿ ಭಾರೀ ಅಕ್ರಮ ಆರೋಪ ಪಾರದರ್ಶಕತೆ ಇಲ್ಲದೆ ಫಲಿತಾಂಶ ಪ್ರಕಟಣೆ ಹಿ ಮರುಪರೀಕ್ಷೆಗೆ ಆಗ್ರಹ
Massive allegations of irregularities in RDCC Bank recruitment, results announced without transparen
ಕೊಪ್ಪಳ 30: ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಆರ್ಡಿಸಿಸಿ) ನಲ್ಲಿ ನಡೆದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ಗೋಲ್ಮಾಲ್ ನಡೆದಿರುವ ಆರೋಪಗಳು ಕೇಳಿಬಂದಿವೆ.ಬ್ಯಾಂಕಿನಲ್ಲಿ ಖಾಲಿ ಇದ್ದ ವಿವಿಧ ವೃಂದದ ಹುದ್ದೆಗಳಿಗೆ 21-11-2025 ರಂದು ನೇಮಕಾತಿ ಪ್ರಕಟಣೆ ಹೊರಡಿಸಿ, ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ನಂತರ ಲಿಖಿತ ಪರೀಕ್ಷೆ ನಡೆಸಲಾಗಿದೆ.
ಆದರೆ ಪರೀಕ್ಷೆಯ ನಂತರ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡದಿರುವುದು ಹಾಗೂ ಕೀ-ಆನ್ಸರ್ ಬಿಡುಗಡೆ ಬಳಿಕ ಲೆಕ್ಕ ಹಾಕಿದ ಅಂಕಗಳು ಮತ್ತು ಅಂತಿಮ ಫಲಿತಾಂಶದಲ್ಲಿ ಪ್ರಕಟವಾದ ಅಂಕಗಳು ಹೊಂದಿಕೆಯಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.ಅಲ್ಲದೆ, ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳ ಸಂಪೂರ್ಣ ಅಂಕಪಟ್ಟಿ (ಮಾರ್ಕ್ಸ ಲಿಸ್ಟ್) ಪ್ರಕಟಿಸದೇ, ಯಾರು ಎಷ್ಟು ಅಂಕ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಪಡಿಸದಿರುವುದು ನೇಮಕಾತಿ ಪಾರದರ್ಶಕತೆಗೆ ಧಕ್ಕೆ ತಂದಿದೆ.
ಕರ್ನಾಟಕ ಸಹಕಾರ ಸಂಘಗಳ ನಿಯಮ 1960ರ ನಿಯಮ 18ರ ಪ್ರಕಾರ, ಲಿಖಿತ ಪರೀಕ್ಷೆಯ ಅಂಕಗಳನ್ನು ಅಭ್ಯರ್ಥಿಗಳಿಗೆ ನೀಡಬೇಕಾಗಿದ್ದರೂ, ಅದು ಪಾಲನೆಯಾಗಿಲ್ಲ ಎನ್ನಲಾಗಿದೆ.ಇನ್ನೂ, 1:5 ಅನುಪಾತದಲ್ಲಿ ತಾತ್ಕಾಲಿಕ ಕಡಿತ ಅಂಕಗಳನ್ನು (ಕಡಿಠಠಚಿಟ ಅಣಣ-ಠಜಿ) ಪ್ರಕಟಿಸಿರುವುದರಲ್ಲಿ ಕೂಡ ಅಕ್ರಮ ಕಂಡುಬಂದಿದ್ದು, ಆಯ್ಕೆ ಪ್ರಕ್ರಿಯೆ ಸರಿಯಾಗಿ ಅನುಸರಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ಮೌಲ್ಯಮಾಪನ ವಿಧಾನ ಸ್ಪಷ್ಟವಾಗದೇ, ಫಲಿತಾಂಶ ಪ್ರಕಟಣೆ ಅಪೂರ್ಣವಾಗಿದೆ ಎಂದು ದೂರಲಾಗಿದೆ.ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯ ಸಮಗ್ರ ತನಿಖೆ ನಡೆಸಿ, ದಾಖಲೆಗಳನ್ನು ಪರೀಶೀಲಿಸಿ ಮರುಮೌಲ್ಯಮಾಪನ ನಡೆಸಬೇಕು. ಇಲ್ಲದಿದ್ದರೆ ಸಂಪೂರ್ಣ ನೇಮಕಾತಿಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಎಸ್.ಎಂ. ಹಿರೇಮಠ ಆಗ್ರಹಿಸಿದ್ದಾರೆ.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಉಲ್ಲಂಘನೆ ಆರೋಪ ಕೇಂದ್ರ ಸರ್ಕಾರದ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ತಿದ್ದುಪಡಿ (ಆಗಸ್ಟ್ 2025) ಪ್ರಕಾರ, ಸಹಕಾರಿ ಬ್ಯಾಂಕುಗಳಲ್ಲಿ ನಿರ್ದೇಶಕರ ಗರಿಷ್ಠ ಅವಧಿ 10 ವರ್ಷಗಳಿಗೆ ಮಿತಿಗೊಳಿಸಲಾಗಿದೆ. ಈ ನಿಯಮ 1 ಆಗಸ್ಟ್ 2025ರಿಂದ ಜಾರಿಯಲ್ಲಿದ್ದರೂ, ಆರ್ಡಿಸಿಸಿ ಬ್ಯಾಂಕ್ನಲ್ಲಿ ಅದನ್ನು ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ರಾಜ್ಯದ ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಈ ಸಂಬಂಧ ಸುತ್ತೋಲೆ ಜಾರಿಯಾಗಿದ್ದರೂ, ಅದನ್ನು ಲೆಕ್ಕಿಸದೆ ನವೆಂಬರ್ನಲ್ಲಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಿರುವುದು ಪ್ರಶ್ನಾರ್ಹವಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 