ನಗರಸಭೆಯಿಂದ ಬೃಹತ್ ಸ್ವಚ್ಛತಾ ಅಭಿಯಾನ
Massive cleanliness drive by the City Municipal Council
ಸವದತ್ತಿ 31: ನಗರದ ಜನತೆಗೆ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಮುಕ್ತ ಕ್ರಮ ಕೈಗೊಳ್ಳಲಾಗಿದ್ದು, ರಾಮಾಪೂರಸೈಟ್ ಪ್ರದೇಶದಲ್ಲಿ ಭರ್ಜರಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ಜರುಗಿತು.ನಗರಸಭೆಯ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ ಅವರ ನೇತೃತ್ವದಲ್ಲಿ ಈ ಅಭಿಯಾನ ನಡೆಯಿತು.
ಪ್ರದೇಶದಲ್ಲಿ ದೀರ್ಘಕಾಲದಿಂದ ಹೂಳು ತುಂಬಿಕೊಂಡು ನಾರುತ್ತಿದ್ದ ಚರಂಡಿಗಳನ್ನು ಕಾರ್ಮಿಕರ ಸಹಾಯದಿಂದ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು. ಜೊತೆಗೆ, ರಸ್ತೆ ಬದಿ ಹಾಗೂ ಖಾಲಿ ಜಾಗಗಳಲ್ಲಿ ಬೆಳೆದು ನಿಂತಿದ್ದ ಪಿಶಾಚಿ ಗಿಡಗಳು ಮತ್ತು ಮುಳ್ಳಿನ ಕಂಟಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವ ಮೂಲಕ ಸೊಳ್ಳೆಗಳ ಉತ್ಪತ್ತಿ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ ಅವರು ಮಾತನಾಡಿ ನಗರದಲ್ಲಿ ಈ ರೀತಿಯ ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ನಮ್ಮ ಈ ಕೆಲಸವನ್ನು ಮೆಚ್ಚಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗರಿಕರು ತಮ್ಮ ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಹಿರಿಯ ಆರೋಗ್ಯ ನೀರೀಕ್ಷಕರು ಚಂದ್ರಶೇಖರ ಮಲಕಣ್ಣವರ, ಹಾಗೂ ಕಿರಿಯ ಆರೋಗ್ಯ ನೀರೀಕ್ಷಕರು ರಾಘವೇಂದ್ರ ವಾಡಕರ, ನಗರಸಭೆ ಸಿಬ್ಬಂದಿ ಬಾಬು ಕೊಪ್ಪದ, ಜಗದೀಶ್ ಕೋರವರ, ಹನಮಂತ ಮಾದರ, ವಸಂತ ಹಿರೇಮನಿ, ಲಕ್ಷ್ಮಣ ಮಾದರ, ಮಂಜುನಾಥ ಜಂಬೂದೀಪ ಉಪಸ್ಥಿತರಿದ್ದರು.ಈ ಸ್ವಚ್ಛತಾ ಕಾರ್ಯದಿಂದ ರಾಮಾಪೂರಸೈಟ್ ಪ್ರದೇಶದ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದು, ಶ್ರಮಿಸಿದ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದ ಅರ್ಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 