ಆಗಸ್ಟ್ 5ರಂದು ಗದಗದಲ್ಲಿ ರೈತರ ಬೃಹತ್ ಪ್ರತಿಭಟನೆ
Massive farmers' protest in Gadag on August 5
ಗದಗ, ಆ. 3: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕದ ನೇತೃತ್ವದಲ್ಲಿ ಆಗಸ್ಟ್ 5ರಂದು ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖಂಡ ಜಗದೀಶ ಮಳಣ್ಣ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ರೈತರು ಭಾಗವಹಿಸಲಿದ್ದು, 500 ಟ್ರ್ಯಕ್ಟರ್ಗಳೊಂದಿಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ರೈತರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರತಿಭಟನೆ ಆಯೋಜಿಸಲಾಗಿದ್ದು, ಹಲವಾರು ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.
ಪ್ರತಿಭಟನೆಗೆ ನಂದಿವೇರಿ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿ, ವಿರಕ್ತಮಠದ ಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮೀಜಿ, ವೇ.ಮೂ. ಗಂಗಾಧರಯ್ಯ ಜಿ. ಹಿರೇಮಠ ಹಾಗೂ ಪೂಜ್ಯ ಶ್ರೀ ಫಕ್ಕೀರಯ್ಯ ಹಿರೇಮಠ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಸವರಾಜ ಸಾಬಳೆ, ಪ್ರಕಾಶ ಮುಧೋಳ, ಸಂಗಮೇಶ ಪವಾಡಶೆಟ್ಟರ್, ವಿಜಯಕುಮಾರ ಸುಂಕದ, ಹುಚ್ಚೀರ್ಪ ಬಡಿಗೇರ, ವೀರ್ಪ ಕಾಳಗಿ, ಪರ್ಪ ಕಡಗಲ್ಲ, ಶರಣಪ್ಪ ಮಾಯಗೇರಿ, ಮುತ್ತಪ್ಪ ಜಗ್ಗಲ್, ಯಲ್ಲಪ್ಪ ಗುರಿಕಾರ, ಗುರುಲಿಂಗಪ್ಪ ತಿಪ್ಪಶೆಟ್ಟಿ, ಮುತ್ತಣ್ಣಗೌಡ ಚೌಡರಡ್ಡಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 