ಭೂಮಿ ಕಳೆದುಕೊಂಡ ರೈತರಿಂದ ಬೃಹತ್ ಪ್ರತಿಭಟನೆ, ಬಲ್ಡೋಟ ಕಂಪನಿಗೆ ಮುತ್ತಿಗೆ ಎಚ್ಚರಿಕೆ
Massive protest by farmers who lost their land; warning issued to lay siege to the Baldota company
ಕೊಪ್ಪಳ, ಆ.17: ಬಿಎಸ್‌ಪಿಎಲ್ (ಬಲ್ಡೋಟ) ಕಂಪನಿಗೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಹಾಗೂ ತಕ್ಷಣ ಕಾರ್ಖಾನೆ ಸ್ಥಾಪಿಸಬೇಕು ಅಥವಾ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಆ.24ರಂದು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ.
ರೈತ ಮುಖಂಡ ಹನುಮಂತಪ್ಪ ಕೌದಿ ಅವರು ಸೋಮವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 20 ವರ್ಷಗಳ ಹಿಂದೆ ಸರ್ಕಾರ ರೈತರಿಂದ ಭೂಮಿ ಸ್ವಾಧೀನಪಡಿಸಿಕೊಂಡು ಬಿಎಸ್‌ಪಿಎಲ್ ಕಂಪನಿಗೆ ಲೀಸ್‌ಗೆ ನೀಡಿತ್ತು. 2023ರಲ್ಲಿ ಕೇಂದ್ರ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ಸರಿಯಾಗಿದೆ ಎಂದು ನ್ಯಾಯಾಲಯದ ಆದೇಶ ಬಂದಿದ್ದರೂ, ಇದುವರೆಗೆ ಕಾರ್ಖಾನೆ ಸ್ಥಾಪನೆಯಾಗಿಲ್ಲ ಎಂದು ಆರೋಪಿಸಿದರು.
ಭೂಮಿ ಕಳೆದುಕೊಂಡು ಉದ್ಯೋಗವೂ ಇಲ್ಲದೆ ರೈತರು ಸಂಕಷ್ಟದಲ್ಲಿದ್ದು, ಕಳೆದ 256 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸರ್ಕಾರ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಆ.24ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ತಹಶೀಲ್ದಾರ್ ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. 2 ಸಾವಿರಕ್ಕೂ ಅಧಿಕ ರೈತರು ಭಾಗವಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಿದ್ದಾರೆ. ಬಳಿಕ ಬಲ್ಡೋಟ ಕಂಪನಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರ ತಕ್ಷಣ ರೈತರ ಸಮಸ್ಯೆಗೆ ಸೂಕ್ತ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹನುಮಂತಪ್ಪ ಕೌದಿ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಕಾಮಣ್ಣ ಕಂಬಳಿ, ಕೆಂಚಪ್ಪ ಹಾಲವರ್ತಿ, ಕೇಮು ಇಟಗಿ, ಹನುಮೇಶ್ ಹಾಲವರ್ತಿ, ಮನೋಜ್ ಹಾಲವರ್ತಿ, ಬೀವೇಮೇಶ್ ಪೂಜಾರ್, ಸ್ವಾಮಿ ಹಾಲವರ್ತಿ, ಪ್ರಾಣೇಶ್ ಹಾಲವರ್ತಿ, ರಾಮಣ್ಣ ಬಸಾಪುರ, ಭೀಮೇಶ್ ಬಹದ್ದೂರ್ ಬಂಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 