800ಕ್ಕೂ ಹೆಚ್ಚು ಶಿಕ್ಷಕರಿಂದ ರಾಣೆಬೆನ್ನೂರಿನಲ್ಲಿ ಬೃಹತ್ ಪ್ರತಿಭಟನೆ; ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ
Massive protest by over 800 teachers in Ranebennur; memorandum submitted to the government through t
ರಾಣೆಬೆನ್ನೂರು, ಜು. 4: ಅನುದಾನಿತ ಪ್ರೌಢಶಾಲೆಗಳಲ್ಲಿ 2006ರ ಏಪ್ರಿಲ್ 1ಕ್ಕೂ ಮೊದಲು ನೇಮಕಗೊಂಡ ಸಿಬ್ಬಂದಿಗೆ ಹಳೆಯ ಪಿಂಚಣಿ ಯೋಜನೆ (ಓಕಖ) ಹಾಗೂ ಕಾಲ್ಪನಿಕ ವೇತನ ಭಡ್ತಿ ನೀಡಬೇಕು. 2006ರ ನಂತರ ನೇಮಕಗೊಂಡ ನೌಕರರಿಗೆ ಹೊಸ ಪಿಂಚಣಿ ಯೋಜನೆ ಸಂಬಂಧ ನ್ಯಾಯಯುತ ಸೌಲಭ್ಯಗಳನ್ನು ಕಲ್ಪಿಸಬೇಕು. ಜೊತೆಗೆ ಸರ್ಕಾರಿ ಶಾಲಾ ಸಿಬ್ಬಂದಿಗೆ ದೊರೆಯುವ ಆರೋಗ್ಯ ಸಂಜೀವಿನಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲಾ ಸಿಬ್ಬಂದಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಶಿವ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ 800ಕ್ಕೂ ಹೆಚ್ಚು ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡು ಸರ್ಕಾರದ ನೀತಿಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್ ಆರ್.ಎಫ್. ಭಗವಾನ್ ಅವರಿಗೆ ಮನವಿ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ರವಾನಿಸುವಂತೆ ಒತ್ತಾಯಿಸಿದರು. ಸಂಘದ ತಾಲೂಕು ಅಧ್ಯಕ್ಷ ಡಾ. ಮಾಲತೇಶ್ ಚಲವಾದಿ ಮಾತನಾಡಿ, ಅನುದಾನಿತ ಶಾಲಾ ನೌಕರರ ಬೇಡಿಕೆಗಳ ಕುರಿತು ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. 2006ರ ಮೊದಲು ಹಾಗೂ ನಂತರ ನೇಮಕಗೊಂಡ ಸಿಬ್ಬಂದಿಯ ನಡುವೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು.
2006ರ ಮಾರ್ಚ್ 31ರವರೆಗೆ ನೇಮಕಗೊಂಡ ಸಿಬ್ಬಂದಿಗೆ ಕಾಲ್ಪನಿಕ ವೇತನ ಭಡ್ತಿ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ಶಾಲಾ ಸಿಬ್ಬಂದಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ಸಿಬ್ಬಂದಿಗೂ ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದರು. ಜುಲೈ 18ರಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ ಸಂಘದ ನಿರ್ದೇಶನದಂತೆ ಮುಂದಿನ ಹಂತದ ಹೋರಾಟಗಳಲ್ಲಿ ಭಾಗವಹಿಸಲಾಗುವುದು ಎಂದು ಸಂಘದ ಮುಖಂಡರು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಎಚ್.ಪಿ. ಬಣಕಾರ, ಶಂಕರ ಚಲವಾದಿ, ಶಿವಾನಂದ ಸಂಗಾಪುರ, ನಾಗರಾಜ ನೆಲವಾಗಲ್, ವೀರೇಶ್ ಜಂಬಿಗಿ, ಚಂದ್ರು ಗ್ಯಾನಗೌಡ್ರ, ಶ್ರೀಕಾಂತ್ ಸಂಜೀವಣ್ಣವರ, ಬಸವರಾಜ ನಾಯಕ, ರಮೇಶ್ ಅಳಲಗೇರಿ, ನಾಗರಾಜ ಮತ್ತೂರು ಸೇರಿದಂತೆ ವಿವಿಧ ಶಿಕ್ಷಕರ ಹಾಗೂ ನೌಕರರ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ತಹಶೀಲ್ದಾರ್ ಆರ್.ಎಫ್. ಭಗವಾನ್ ಮನವಿ ಸ್ವೀಕರಿಸಿ, ಅದನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 