ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನೆ
Massive protest condemning the NEET question paper leak
ಬೀಳಗಿ 25 : ತಾಲೂಕಿನ ವಿವಿಧ ಸಂಘಟನೆಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಶನಿವಾರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ವೃತ್ತದಲ್ಲಿ ಜಮಾಹಿಸಿದ ಪ್ರತಿಭಟನಾಕಾರರು ಅಲ್ಲಿಂದ ಮಿನಿ ವಿಧಾನ ಸೌಧದವರೆಗೆ ಜಾಥಾ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷನೆ ಕೂಗಿದರು. ಬಸ್ ನಿಲ್ದಾನದ ಹತ್ತಿರ ಮಾನವ ಸರಪಳಿ ನಿರ್ಮಿಸಿದದ ಪ್ರತಿಭಟನಕಾರರು ನಂತರ ತಹಶೀಲ್ದಾರ ವಿನೋದ ಹತ್ತಳ್ಳಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ಮುಖಂಡ ಪ್ರವೀಣ ಪಾಟೀಲ ಮಾತನಾಡಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಕನಸು ಹಾಗೂ ದೇಶದ ಶಿಕ್ಷಣದ ಮೌಲ್ಯವನ್ನು ಉಳಿಸಬೇಕಾದರೆ ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆ ಯಾವುದೇ ರಾಜಕೀಯ ಪ್ರೇರೆಪಿತವಲ್ಲ. ಪಕ್ಷಾತೀತವಾಗಿ ಮಾಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನ್ಯಾಯಯುತ ಹೋರಾಟವಾಗಿದೆ.
ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಿಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಪ್ರತಿಭಾವಂತರ ಅವಕಾಶವನ್ನು ಕಸಿದುಕೊಳ್ಳುವುದು ಅತ್ಯಂತ ಖಂಡನೀಯ. ದೇಶದ ಯುವಜನತೆ ನ್ಯಾಯಯುತ ಸ್ಪರ್ಧೆಯ ಮೂಲಕ ಮುಂದೆ ಬರಬೇಕೇ ಹೊರತು ಅಕ್ರಮಗಳ ಮೂಲಕ ಅಲ್ಲ. ಆದ್ದರಿಂದ ಕೇಂದ್ರ ಸರಕಾರ ಹಾಗೂ ಸಂಬಂಧಿಸಿದ ತನಿಖಾ ಸಂಸ್ಥೆಗಳು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಧಮಂತಿ ಮತನಾಡಿ, ಲಕ್ಷಾಂತರ ಮಕ್ಕಳ ಕನಸ್ಸುಗಳಿಗೆ ಇಂದೇ ರಾತ್ರಿಗೆ ಹಾಳುಗೆಡುವಿದ್ದು ಕೇಂದ್ರ ಸರಕಾರದ ಶಿಕ್ಷಣ ಮಂತ್ರಿಗಳು. 21 ವಿದ್ಯಾರ್ಥಿಗಳ ಜೀವ ವಾಪಸ್ಸ್ ಕೊಡಲು ಯಾರಿಂದಲೂ ಆಗಲ್ಲ. ಆದರೆ ಈ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಿ ಅವರ ಕುಟುಂಬರ ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.
"ವಿದ್ಯಾರ್ಥಿಗಳ ಕನಸುಗಳಿಗೆ ನ್ಯಾಯ ಸಿಗುವವರೆಗೂ ನಮ್ಮ ಧ್ವನಿ ನಿಲ್ಲುವುದಿಲ್ಲ. ಶಿಕ್ಷಣದ ಪಾವಿತ್ರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನ್ಯಾಯಕ್ಕಾಗಿ ಕೈಜೋಡಿಸೋಣ, ಭವಿಷ್ಯವನ್ನು ಉಳಿಸೋಣ" ಎಂದರು. ಪ್ರತಿಭಟನೆಯಲ್ಲಿ ಪಟ್ಟಣದ ವ್ಯಾಪಾರಸ್ಥರು, ಸಾರ್ವಜನಿಕರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿ ಹೋರಾಟದಲ್ಲಿ ಭಾಗವಹಿಸಿದ್ದರು.
ರೈತ ಸಂಘದ ತಾಲೂಕಾ ಅಧ್ಯಕ್ಷ ಶಿವನಗೌಡ ಪಾಟೀಲ್, ಬಸವರಾಜ್ ಗೋನಾಳ ಅನೇಕ ವಿದ್ಯಾರ್ಥಿಗಳು ಮಾತನಾಡಿದರು. ಭೀಮ್ ಆರ್ಮಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುಸನಪ್ಪ ಚಲವಾದಿ, ರಾಘವೇಂದ್ರ ಶಟ್ಟಿ, ಹಸನ್ ನದಾಫ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಅಧ್ಯಕ್ಷ ರಾಚಣ್ಣ ಸನದಿ, ಮಲ್ಲು ಲಮಾಣಿ ಇತರರು ಇದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 