ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Massive protest demanding appointment of guest lecturers
ಜಮಖಂಡಿ 23: ನಗರದಲ್ಲಿ ಎಬಿವಿಪಿ ಸಂಘಟನೆಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ನಗರದ ಎ,ಜಿ,ದೇಸಾಯಿ ಸರ್ಕಲ್‌ನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಸೇರಿಕೊಂಡು ಮಾನವಸರಪಳಿ ಮೂಲಕ ರಸ್ತೆ ತಡೆಯನ್ನು ನಡೆಸಿ ಸರಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ಪ್ರತಿಭಟನೆಯನ್ನು ಮಾಡಿದರು. ನಂತರ ಗ್ರೇಡ್ 2 ತಹಶೀಲ್ದಾರ ಬಿರಡಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲಿಸಿದರು.
ರಾಜ್ಯದಲ್ಲಿ ಕಳೆದ 3 ತಿಂಗಳು ಗತಿಸಿದರು ಇದುವರೆಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿರುವುದಿಲ್ಲ. ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಪರೀಕ್ಷೆ ಸಮಯದಲ್ಲಿ ಹೆಚ್ಚು ಅಂಕಗಳನ್ನು ಪಡೆಯಲು ಸಾಧ್ಯವಾಗತ್ತಿಲ್ಲ. ಸರಕಾರ ಇದುವರೆಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುತ್ತಿಲ್ಲ ಎಂದು ಆರೋಪಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 