ಜೂನ್ 30 ರಂದು ಮೂಕಿಹಾಳದಲ್ಲಿ ಬೃಹತ್ ಪ್ರತಿಭಟನೆ : ಶಾಂತಗೌಡ ಪಾಟೀಲ
Massive protest in Mookihal on June 30: Shantagouda Patil
ತಾಳಿಕೋಟಿ 25 : ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಏಳು ಗ್ರಾಮಗಳ ಜನರ ಹಲವಾರು ಗಂಭೀರ ಸಮಸ್ಯೆಗಳ ಪರಿಹಾರ ಕುರಿತು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷೆಯ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಮೂಕಿಹಾಳ ಗ್ರಾಮ ಪಂಚಾಯತ್ ಎದುರಿಗೆ ಜೂನ್ 30 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ 2019 ರಿಂದ ಇಲ್ಲಿಯವರೆಗೆ ಮೂಕಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ 7 ಗ್ರಾಮಗಳ ರೈತರಿಗೆ ಫಸಲ್ ಭೀಮಾ ಯೋಜನೆಯ ಹಣ ಸಿಕ್ಕಿಲ್ಲ ಇದರಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತಿದೆ ಅಧಿಕಾರಿಗಳು ಇನ್ಸೂರೆನ್ಸ್ ಕಂಪನಿ ಅವರೊಂದಿಗೆ ಶಾಮೀಲಾ ಗಿದ್ದಾರೆ ಎಂದು ಆರೋಪಿಸಿದ ಅವರು ಇದರಲ್ಲಿ ದೊಡ್ಡ ಮಟ್ಟದ ಗೋಲ್ಮಾಲ್ ನಡೆದಿದೆ ಇದರ ತನಿಖೆ ಆಗಬೇಕು.
ಅಧಿಕಾರಿಗಳಿಂದ ಇದರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಇದರ ಜೊತೆಗೆ ಈ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರನಾಳ, ನಾಗೂರ, ಕಲ್ಲದೇವನಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆ ಇದೆ. ಪಂಚಾಯತಿ ವ್ಯಾಪ್ತಿಯಲ್ಲಿ 10 ಶುದ್ಧ ಕುಡಿಯುವ ನೀರಿನ ಘಟಕ ಇದ್ದರು ಎಲ್ಲವೂ ಸ್ಥಗಿತ ಗೊಂಡಿವೆ. ಆರ್ಡಬ್ಲ್ಯೂಎಸ್ ಇಲಾಖೆ,ತಾಪಂ ಹಾಗೂ ಮೂಕಿಹಾಳ ಗ್ರಾಮ ಪಂಚಾಯತ್ ಈ ನಿಟ್ಟಿನಲ್ಲಿ ಸಂಪೂರ್ಣ ವಿಫಲವಾಗಿವೆ.
ಬಪ್ಪರಗಿ ಗ್ರಾಮದ ಹತ್ತಿರ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಇದ್ದರು ಯಾವುದೇ ರೀತಿಯ ನೀರಿನ ಪೂರೈಕೆ ಇಲ್ಲ ಎಂದ ಅವರು ಮೂಕೀಹಾಳ ಗ್ರಾಮ ಪಂಚಾಯಿತಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಂಜೂರಾದ 168 ಮನೆಗಳು ಇಲ್ಲಿಯವರೆಗೆ ನಿರ್ಮಾಣ ಆಗಿಲ್ಲ ಇದರಲ್ಲಿಯೂ ಫಲಾನುಭವಿಗಳ ಆಯ್ಕೆ ಮಾನದಂಡದ ಅನುಸಾರವಾಗಿ ಮಾಡಿಲ್ಲ ಈ ಎಲ್ಲ ವಿಷಯಗಳ ಕುರಿತು ಅಂದಿನ ದಿನದ ಹೋರಾಟದಲ್ಲಿ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಆದ್ದರಿಂದ ಈ ಐತಿಹಾಸಿಕ ಪ್ರತಿಭಟನಾ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.
ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಹಾಗೂ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ ಜೂನ್ 30ರ ಒಳಗಾಗಿ ಅಧಿಕಾರಿಗಳು ಎಚ್ಚೆತ್ತು ಈ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ವಹಿಸದೇ ಹೋದಲ್ಲಿ ಇದಕ್ಕಿಂತ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕ ಯುವ ಘಟಕದ ಅಧ್ಯಕ್ಷ ದೇವರಾಜ ಗುಂಡಕನಾಳ, ತಾಲೂಕ ಅಧ್ಯಕ್ಷ ಶ್ರೀಶೈಲ್ ವಾಲಿಕಾರ, ಶಿವಪುರ ಘಟಕ ಅಧ್ಯಕ್ಷ ಉಮೇಶ ಮಕಾಳಿ, ಹಣಮಂತ ಗೋನಾಳ, ಯಲ್ಲು ಹಡಗಿನಾಳ, ಹಣಮಂತ್ರಾಯ ಮಕಾಳಿ, ಬಸವರಾಜ ಮಕಾಳಿ, ಹನೀಫ ಮುಲ್ಲಾ, ಮೈಬು ಅವಟಿ, ದೇವಣ್ಣ ಮೇಟಿ, ಸತೀಶ ಬಡಿಗೇರ, ಪರಸು ಕೊಡೆಕಲ್ಲ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 