ದೇವರಹಿಪ್ಪರಗಿ 12: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏ. 13ರಂದು ಬೆಳಿಗ್ಗೆ 9:00 ಗಂಟೆಗೆ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ವರೆಗೆ ಅಂಜುಮನ್ ಕಮಿಟಿ ಹಾಗೂ ತಾಲೂಕಿನ ವಿವಿಧ ಸಂಘಟನೆಗಳಿಂದ ಬೃಹತ್ ವಕ್ಫ್ ಸಂರಕ್ಷಣಾ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಪಟ್ಟಣದ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಮೈಹಿಬೂಬ ಹುಂಡೆಕಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿ ಕೊಳ್ಳಲಾಗಿದೆ. ಸಮಾವೇಶದಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳ ವಿವಿಧ ಸಂಘಟನೆಗಳಿಂದ ಗರಿಷ್ಠ ಮಟ್ಟದಲ್ಲಿ ಜನರು ಬಂದು ಸಭೆವನ್ನು ಯಶಸ್ವಿಗೊಳಿಸ ಬೇಕು ಎಂದು ಹೇಳಿದರು.
ಪ.ಪಂ ಸದಸ್ಯರಾದ ಬಸೀರ ಅಹ್ಮದ್ ಬೇಪಾರಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮುದಾಯಕ್ಕೆ ಮಾರಕವಾಗಲಿದೆ. ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಆದ್ದರಿಂದ ಪ್ರತಿಭಟನೆ ಮೂಲಕ ಕಾಯ್ದೆ ಹಿಂಪಡೆಯುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷರಾದ ಪ್ರಭು ಅಂಬಲಗಿ,ಅಂಜುಮನ್ ಕಮಿಟಿ ಉಪಾಧ್ಯಕ್ಷರಾದ ರಫೀಕ್ ಪಾನಪರೊಷ್ ಹಾಗೂ ಯುವ ಮುಖಂಡ ಮುನೀರ್ ಅಹ್ಮದ್ ಮಳಖೇಡ ಅವರು ಮಾತನಾಡಿ,ಧಾರ್ಮಿಕ ಸ್ವಾತಂತ್ರ್ಯ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಇದಾಗಿದ್ದು, ವಕ್ಸ್ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಹಾನಿ ಮಾಡುತ್ತದೆ. ಮಸೂದೆಯನ್ನು ಹಿಂಪಡೆಯಲು ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ಕೋಟ್ಯಾಂತರ ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗುವಂತೆ ಒತ್ತಾಯಿಸುವ ಸಲುವಾಗಿ ತಾಲೂಕಿನ ವಿವಿಧ ಸಂಘಟನೆಗಳ ಹಾಗೂ ಅಂಜುಮನ್ ಕಮಿಟಿ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಶಾಂತಿಯುತವಾಗಿ ಹಮ್ಮಿಕೊಳ್ಳಲಾಗಿದ್ದು ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಇದೇ ಸಂದರ್ಭದಲ್ಲಿ ಪ.ಪಂ ಮಾಜಿ ಅಧ್ಯಕ್ಷರಾದ ಭಾಸ್ಕರ್ ಗುಡಿಮನಿ, ಮುಖಂಡರುಗಳಾದ ಹಾಜಿಲಾಲ್ ಮಸಳಿ, ಬಾಬು ದೇವಣಗಾಂವ, ಹೈದರಸಾಬ ಮುಲ್ಲಾ ,ಸುರೇಶ ಒಡೆಯರ್, ಸಮೀರ್ ಮಕಾಂದಾರ, ಹಾಸಿಂ ಹಳ್ಳಿ, ಇಮಾನ್ ಮುಲ್ಲಾ, ಬಬುಲು ತಾಂಬೋಳಿ, ಬಂದೇನಮಾಜ ಬಂದುಗೋಳ, ಯಾಸಿನ್ ಚೌದರಿ, ಮಹಮ್ಮದ್ ಸೋಹೇಲ್ ಮುಲ್ಲಾ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.