ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ರಾಜ್ಯಮಟ್ಟದ ಬೃಹತ್ ಜನಸಮಾವೇಶ!
Massive state-level public rally against the KPS Magnet project!
ಧಾರವಾಡ04: 40 ಸಾವಿರ ಸರ್ಕಾರಿ ಶಾಲೆಗಳನ್ನು ಉಳಿಸಲು ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಹಿಳೆಯರು, ಯುವಕರು, ರೈತರು ಹಾಗೂ ಕಾರ್ಮಿಕರು ಸಹಸ್ರ ಸಂಖ್ಯೆಯಲ್ಲಿ ಮುನ್ನಡೆಯಿರಿ! ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಏಪ್ರಿಲ್ 10 ರಂದು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ನಡೆಯುತ್ತಿರುವ ನಮ್ಮೂರ ಶಾಲೆ ಉಳಿಸಿ ರಾಜ್ಯಮಟ್ಟದ ಸಮಾವೇಶದ ಕುರಿತು ಇಂದು ಎಐಡಿಎ??? ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಧಾರವಾಡದ ಸರ್ಕಿಟ್ ಹೌಸ್ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಲಾಯಿತು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಎಐಡಿಎ ಜಿಲ್ಲಾ ಅಧ್ಯಕ್ಷರಾದ ಶಶಿಕಲಾ ಮೇಟಿ ಮಾತನಾಡಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಕಳೆದ 4 ತಿಂಗಳಿನಿಂದ ಜನ ಹೋರಾಟ ನಡೆದಿದೆ. ಎಐಡಿಎ ನೇತೃತ್ವದಲ್ಲಿ ರಾಜ್ಯದಾದ್ಯಂತ ಹಳ್ಳಿ-ಹಳ್ಳಿಗಳಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಗಳನ್ನು ರಚಿಸಿಕೊಂಡು ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಒಕ್ಕೊರಲಿನಿಂದ ಧ್ವನಿಯೆತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿ ಹೋಗುವ ಸ್ಥಿತಿಯಲ್ಲಿದೆ. ನಾಡಿನ ಹೆಸರಾಂತ ಸಾಹಿತಿಗಳು, ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಪ್ರೇಮಿಗಳು ಬಡಮಕ್ಕಳನ್ನು ಶಿಕ್ಷಣದಿಂದ ಶಾಶ್ವತವಾಗಿ ದೂರ ತಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ನಾಡಿನ ಜನತೆಯ ತೀವ್ರ ವಿರೋಧದ ನಡುವೆಯೂ ಸರ್ಕಾರ ಶಾಲೆಗಳನ್ನು ಮುಚ್ಚುವ ಕೆಲಸವನ್ನು ಮುಂದುವರಿಸಿದೆ. ಸರ್ಕಾರವು ಈಗಾಗಲೇ ಯಾವ-ಯಾವ ಶಾಲೆಗಳನ್ನು ವೀಲೀನಗೊಳಿಸಬೇಕೆಂದು ಮ್ಯಾಪಿಂಗ್ ನಡೆಸಿದೆ. ಅಧಿಕಾರಿಗಳಿಂದ ಮ್ಯಾಗ್ನೆಟ್ ಶಾಲೆಯ ಸಮೀಕ್ಷೆ ಮಾಡಿಸಲಾಗುತ್ತಿದೆ. ವೀಲೀನಗೊಳ್ಳುವ ಶಾಲೆಗಳ ಮುಖ್ಯಶಿಕ್ಷಕರಿಗೆ ಮೌಖಿಕವಾಗಿ ಆದೇಶ ನೀಡಲಾಗಿದೆ. ಏಪ್ರಿಲ್ 8 ಮತ್ತು 9 ರಂದು ನಡೆಯಲಿರುವ ಪೋಷಕರ ಸಭೆಗಳಲ್ಲಿ , ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳನ್ನು ಏಕಖ ಶಾಲೆಗೆ ಕಳುಹಿಸುವಂತೆ ಒತ್ತಾಯಿಸಲು ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ಈ ಯೋಜನೆಯನ್ನು ಶತಾಯಗತಾಯ ಅನುಷ್ಠಾನಗೊಳಿಸಲು ಏಪ್ರಿಲ್ ಒಂದರಂದು ಜಿಲ್ಲೆಯ ಡಿಡಿಪಿಐ ಹಾಗೂ ಬಿಇಓಗಳ ಸಭೆಯನ್ನು ನಡೆಸಿ ಶಾಲೆ ಮುಚ್ಚಲು ಕುತಂತ್ರ ನಡೆಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 