ಶಾಲೆಗಳ ಉಳಿವಿಗಾಗಿ ಕೊಪ್ಪಳದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
Massive student protest in Koppal for the survival of schools
* ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರ
*ಮುಚ್ಚುವ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಯ 663 ಶಾಲೆಗಳು
ಕೊಪ್ಪಳ 28: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸುತ್ತಲಿನ ಶಾಲೆಗಳ ವೀಲೀನದೊಂದಿಗೆ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಕೊಪ್ಪಳದ ಅಶೋಕ ವೃತ್ತದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಅಧ್ಯಕ್ಷರು ಹಾಗೂ ಕೊಪ್ಪಳದ ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು ಅವರು ಕೊಪ್ಪಳದಲ್ಲಿ ಬುಚ್ಚಲ್ಪಡುವ ಪಟ್ಟಿಯಲ್ಲಿರುವ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿ, ಮಾತನಾಡಿದ ಅವರು ಸರ್ಕಾರ ಇಂದು ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಬೇಕಾದರೆ ಆ ಶಾಲೆಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಕಾಯಂ ಶಿಕ್ಷಕರು ಮತ್ತು ಉತ್ತಮ ಪರಿಸರವನ್ನು ನಿರ್ಮಿಸಬೇಕು, ಆದರೆ ವಿಪರ್ಯಾಸವೆಂದರೆ ಸರ್ಕಾರವು ವಿವಿಧ ಯೋಜನೆಗಳ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಖಂಡನೀಯ ಈ ಯೋಜನೆಗೆ ರೂ. 2,500 ಕೋಟಿ ಸಾಲ ಪಡೆದಿರುವುದು ಸರ್ಕಾರದ ನಾಚಿಕೆಗೇಡಿನ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹಾಗೇ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸಿಂಧೂ ಕೌದಿ ಮಾತನಾಡಿ ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸಿದ್ಧತೆ ನಡೆಸಿದೆ ಎಂದು ಆರೋಪಿಸಿದರು. ಗುಣಮಟ್ಟ ಮತ್ತು ಮಾದರಿ ಶಾಲೆಗಳು ಎಂಬ ಆಕರ್ಷಕ ಪದಗಳ ಹಿಂದೆ ಉಚಿತ ಮತ್ತು ಸಾರ್ವತಿಕ ಶಿಕ್ಷಣದ ನಮ್ಮ ನವೋದಯ ಚಿಂತಕರು ಕ್ರಾಂತಿಕಾರಿಗಳು ಕಷ್ಟಪಟ್ಟು ಗಳಿಸಿದ ವ್ಯವಸ್ಥೆಯನ್ನು ನಾಶಪಡಿಸುವ ಒಂದು ನಿಷ್ಕರುಣಾ ಪ್ರಯತ್ನ ಅಡಗಿದೆ ಎಂದು ದೂರಿದರು. ಕೆಪಿಎಸ್ ಶಾಲೆಯನ್ನು ತೆರೆಯುವಲ್ಲಿ ನಮಗೆ ಸಮಸ್ಯೆ ಇಲ್ಲ ಆದರೆ ಕೇವಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೆರೆಯುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಅತ್ಯಂತ ಅಪಾಯಕಾರಿಯಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಒಟ್ಟು 49,600 ಸರ್ಕಾರಿ ಶಾಲೆಗಳಿವೆ. 30,000 ಗ್ರಾಮಗಳಿರುವ ನಮ್ಮ ರಾಜ್ಯದಲ್ಲಿ ಕೇವಲ 5,900 ಗ್ರಾಮ ಪಂಚಾಯಿತಿಗಳಿವೆ. ಸರ್ಕಾರದ ಯೋಜನೆಯ ಪ್ರಕಾರ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ 5,900 ಶಾಲೆಗಳು ಮಾತ್ರ ಉಳಿಯುತ್ತವೆ. ಹೀಗಾದಲ್ಲಿ ಇನ್ನುಳಿದ 40,000 ಶಾಲೆಗಳು ಮುಚ್ಚಿಹೋಗುವ ಅಪಾಯಕ್ಕೆ ತುತ್ತಾಗುತ್ತವೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ನಂತರ ಎ.ಐ.ಡಿ.ಎಸ್.ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಮಾತನಾಡಿ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಪಟ್ಟಿಯಲ್ಲಿ ಕೊಪ್ಪಳದ 663 ಶಾಲೆಗಳಿವೆ, ಇದರಲ್ಲಿ ಬಹುಪಾಲು ಹಳ್ಳಿ ಮಟ್ಟದಲ್ಲಿರುವ ಶಾಲೆಗಳು ಇವೆ. ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ ಒಂದರಿಂದ ಐದು ಕಿಲೋಮೀಟರ್ ವ್ಯಾಪ್ತಿ 50 ಕಿಂತ ಕಡಿಮೆ ದಾಖಲಾತಿ ಹೊಂದಿರುವ ಚಿಕ್ಕಪುಟ್ಟ ಶಾಲೆಗಳನ್ನು ತನ್ನಲ್ಲಿ ವೀಲೀನಗೊಳಿಸಿಕೊಳ್ಳಲಿದೆ ಎನ್ನಲಾಗಿದೆ. ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತವೆ ಎಂದು ಹೇಳುತ್ತಿದೆ.
ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ವಾಸ್ತವತೆ ಹೀಗಿರುವಾಗ 6-7 ಕಿ.ಮೀ ದೂರದ ಶಾಲೆಯನ್ನು ತಲುಪಲಾಗದ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರೆ ಅಷ್ಟೇ. ಈ ಯೋಜನೆಗೆ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ನಿಂದ ಈಗಾಗಲೇ ?2,500 ಕೋಟಿ ಸಾಲ ಪಡೆದಿರುವ ಮತ್ತು 10,000 ಕೋಟಿ ಸಾಲ ಪಡೆಯಲಿರುವ ಸರ್ಕಾರವು ಕಾರ್ೊರೇಟರ್ ಶಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿವೆ ಎಂದು ಕಿಡಿಕಾರಿದರು. ಸರ್ಕಾರಿ ಶಾಲೆಗಳನ್ನು ರಕ್ಷಿಸಲು ಪ್ರತಿಯೊಬ್ಬ ವಿದ್ಯಾರ್ಥಿ ಪೋಷಕರು ಮತ್ತು ಶಿಕ್ಷಕರು ಒಂದಾಗಬೇಕೆಂದು ಕರೆ ನೀಡಿದರು.ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳಾದ ಶಿಲ್ಪ, ಸಂಜನಾ, ನೇತ್ರಾ, ಪೂಜಾ,ವಿಜಯ ಲಕ್ಷ್ಮಿ, ರಾಜ ಸಾಬ್, ಮಂಗಳೇಶ್ ಸೇರಿದಂತೆ ಇತರೆ ಸಾರ್ವಜನಿಕರಿದ್ದರು.ಸುದ್ದ ಇವರಿಂದ,ಗಂಗರಾಜ ಅಳ್ಳಳ್ಳಿಜಿಲ್ಲಾ ಸಂಚಾಲಕರು ಎಐಡಿಎಸ್‌ಓ ಕೊಪ್ಪಳ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 