ಇಂಡಿ ತಾಲ್ಲೂಕಿನ ಮಠಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳು: ಡಾ. ಸಂಗಮೇಶ ಮೇತ್ರಿ
Mathas in Indi Taluk are centers of social transformation: Dr. Sangamesha Maitri
ಇಂಡಿ 26: ಮಠಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಮಾಜದಲ್ಲಿ ಸಾಂಸ್ಕೃತಿಕ ಹಾಗೂ ಸಾಮಾಜಿಕ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಸಾಹಿತಿ ಡಾ. ಸಂಗಮೇಶ ಮೇತ್ರಿ ಹೇಳಿದರು. ಭೀಮಾಂತರಂಗ ಆನ್ಲೈನ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಜಾಗೃತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ‘ಇಂಡಿ ತಾಲ್ಲೂಕಿನ ಮಠ ಮಾನ್ಯಗಳು’ ಕುರಿತ ಆನ್ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಹಾಗೂ ಶಿಕ್ಷಣ, ಸಂಸ್ಕೃತಿ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಇಂಡಿ ತಾಲ್ಲೂಕಿನ ಹಲವು ಮಠಗಳು ಪ್ರಮುಖ ಪಾತ್ರ ವಹಿಸಿವೆ ಎಂದು ತಿಳಿಸಿದರು.
ಇಂಚಗೇರಿ ಮಠ, ಬಂಥನಾಳ ಮಠ, ಗೋಳಸಾರ ಮಠ ಹಾಗೂ ಲಚ್ಯಾಣ ಮಠಗಳು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು. ಇಂಡಿ ತಾಲ್ಲೂಕಿನ ಮಠಗಳು ಆಧ್ಯಾತ್ಮಿಕ ಜಾಗೃತಿ, ಶೈಕ್ಷಣಿಕ ಪ್ರಗತಿ ಹಾಗೂ ಸಾಮಾಜಿಕ ಸೌಹಾರ್ದ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಗ್ರಾಮೀಣ ಪ್ರದೇಶಗಳಲ್ಲಿ ಧರ್ಮ, ಸಂಸ್ಕೃತಿ, ನೈತಿಕತೆ, ಭಕ್ತಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಅವುಗಳ ಸೇವೆ ಅನನ್ಯವಾಗಿದೆ ಎಂದರು. ಜಾತಿ-ಮತ ಭೇದವಿಲ್ಲದೆ ಎಲ್ಲರಿಗೂ ಸಮಾನತೆ ಮತ್ತು ಮಾನವೀಯತೆಯ ಸಂದೇಶ ಸಾರುತ್ತಿರುವ ಮಠಗಳು ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು.
ಸಾಹಿತಿ ಸಿ.ಎಂ. ಬಂಡಗರ ಸಮಾರೋಪ ಭಾಷಣದಲ್ಲಿ, ಮಠಗಳು ತಮ್ಮ ಪರಂಪರೆಯನ್ನು ಉಳಿಸಿಕೊಂಡು ಸಮಕಾಲೀನ ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಡಾ. ಚನ್ನಪ್ಪ ಕಟ್ಟಿ, ಕವಿ ದೇವು ಮಾಕೊಂಡ, ಗೀತಾಯೋಗಿ, ವೈ.ಜಿ. ಬಿರಾದಾರ, ಸದಾನಂದ ಈರಣಕೇರಿ, ಸಿದ್ರಾಮಪ್ಪ ಮಾರನೂರ, ರಾಚು ಕೊಪ್ಪ, ನಿಂಗಣ್ಣ ಬಿರಾದಾರ, ಡಾ. ರಾಜಶ್ರೀ ಮಾರನೂರ, ರವಿ ಅರಳಿ, ಆರಿ್ವ. ಪಾಟೀಲ, ಸಂಗನಗೌಡ ಹಚ್ಚಡದ, ಅನಿತಾ ಅಳಗುಂಡಗಿ, ರೇಖಾ ನಾಗಠಾಣ, ಸುವರ್ಣ ಗುರುವ ಹಾಗೂ ಸಂಗಮೇಶ ಗುರುವ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಶಿಕ್ಷಕ ಸಂತೋಷ ಬಂಡೆ ಕಾರ್ಯಕ್ರಮವನ್ನು ಸ್ವಾಗತಿಸಿ ಪರಿಚಯಿಸಿದರು. ಶಿಕ್ಷಕ ಶ್ರೀಧರ ಹಿಪ್ಪರಗಿ ಕಾರ್ಯಕ್ರಮ ನಿರೂಪಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 