ಮಟ್ಕಾ: ಬೆಳಗಾವಿ ಗ್ರಾಮೀಣ ಪೊಲೀಸರಿಂದ ದಾಳಿ, ಓರ್ವನ ಬಂಧನ
Matka: Belgaum Rural Police raid, one arrested
ಬೆಳಗಾವಿ 11: ಮಟ್ಕಾ ಓಸಿ ಅದೃಷ್ಟದ ಆಟದ ಅಂಕಿ ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಆಟವಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ರೂ. 2,500 ನಗದು ಹಣ ಹಾಗೂ ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ದೇಸೂರ ಶಿವಾಜಿ ನಗರ ನಿವಾಸಿ ಅನೀಲಕುಮಾರ ಮಾರುತಿ ಭಜಂತ್ರಿ(32) ಆರೋಪಿಯಾಗಿದ್ದು, ಈತ ದಿ.10ರಂದು ಇವನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ದೇಸೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಓಸಿ ಆಟವಾಡುತ್ತಿದ್ದಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಮ.ಪಿಎಸ್‌ಐ ಶ್ವೇತಾ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಅವನಿಂದ ಒಟ್ಟು ರೂ. 2,500 ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದಾರೆ.
ಆರೋಪಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.
ದಾಳಿ ಮಾಡಿ ಆರೋಪಿತನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ ಮಪಿಎಸ್‌ಐ ಹಾಗೂ ಸಿಬ್ಬಂದಿಯವರ ತಂಡದ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 