ಗದಗ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಮಾದರಿಯಾದ ಮತ್ಸ್ಯ ಸಂಜೀವಿನಿ ಯೋಜನೆ ಮೀನುಗಾರಿಕೆಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಉತ್ತಮ ಆದಾಯ...!

ಗದಗ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಮಾದರಿಯಾದ ಮತ್ಸ್ಯ ಸಂಜೀವಿನಿ ಯೋಜನೆ ಮೀನುಗಾರಿಕೆಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಉತ್ತಮ ಆದಾಯ...! Matsya Sanjeevini Yojana, a model for women empowerment in Gadag district, provides good income to w

ಗದಗ 05 :  ಸಂಜೀವಿನಿ ಯೋಜನೆಯಡಿ ಅನುಷ್ಠಾನಗೊಂಡಿರುವ “ಮತ್ಸ್ಯ ಸಂಜೀವಿನಿ” ಯೋಜನೆಯು ಗದಗ ಜಿಲ್ಲೆಯ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೊಸ ದಿಕ್ಕು ತೋರಿಸಿದೆ. ತಾಲೂಕಿನ ಹಾತಲಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬಾಪುರ ಗ್ರಾಮದ ಪ್ರಕೃತಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಮೀನು ಸಾಕಾಣಿಕೆ ಮೂಲಕ ಉತ್ತಮ ಆದಾಯ ಗಳಿಸಿ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.

ಜಿಲ್ಲೆಯಾದ್ಯಂತ 16 ಗ್ರಾಮ ಪಂಚಾಯತ್ ಮಟ್ಟದ ಕೆರೆಗಳನ್ನು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮೂಲಕ ಗುತ್ತಿಗೆ ಪಡೆದು ಸ್ವಸಹಾಯ ಸಂಘಗಳ ಸದಸ್ಯರಿಗೆ ಮೀನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಡಿ ಹಾತಲಗೇರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಪ್ರಕೃತಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಕೈಜೋಡಿಸಿ ಯಶಸ್ವಿ ಮೀನುಗಾರಿಕೆ ಮಾದರಿಯನ್ನು ನಿರ್ಮಿಸಿದ್ದಾರೆ.ಹೋರಾಟದಿಂದ ಆರಂಭವಾದ ಪಯಣ ಪ್ರಕೃತಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿದ್ದು, ಅಲ್ಪ ಪ್ರಮಾಣದ ಕೃಷಿ ಹಾಗೂ ಕೂಲಿ ಕೆಲಸಗಳನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದರು.

ಕುಟುಂಬದ ಅಗತ್ಯಗಳನ್ನು ಪೂರೈಸುವುದು ಕೂಡ ಸವಾಲಾಗಿದ್ದ ಸಂದರ್ಭದಲ್ಲಿ ಸಂಜೀವಿನಿ ಯೋಜನೆಯಡಿ ಅವರನ್ನು ಗುರುತಿಸಿ ಹೊಸ ಜೀವನೋಪಾಯದ ಅವಕಾಶ ಒದಗಿಸಲಾಯಿತು.ಕಳೆದ ವರ್ಷ 2025 ರಲ್ಲಿ ಜಿಲ್ಲಾ ಪಂಚಾಯತ್ ಗದಗ ಜಿಲ್ಲಾ ಸಂಪನ್ಮೂಲ ಕೇಂದ್ರ, ಹುಲಕೋಟೆಯಲ್ಲಿ ಗದಗ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮೂರು ದಿನಗಳ ವಸತಿ ಸಹಿತ ವಿಶೇಷ ತರಬೇತಿ ನೀಡಲಾಗಿತ್ತು.