ಮೌಲಾನಾ ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ
Maulana Azad's contribution to higher education is invaluable: Dr. Ramu Sajjana
ವಿಜಯಪುರ 17 : ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ ದಿನಾಚರಣೆ” ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಶಿಕ್ಷಣದ ಅಭಿವೃದ್ದಿ ಮೂಲಕ ಸಮಾಜದ ಪ್ರಗತಿಗೆ ಪೂರಕವಾಗಬೇಕು. ಶಿಕ್ಷಣವು ಕೇವಲ ಜ್ಞಾನವಲ್ಲ, ಅದು ಸಾಮಾಜಿಕ ಬದಲಾವಣೆಗೆ ದಾರಿ ತೋರಿಸುವ ಅತ್ಯಂತ ಮಹತ್ವದ ಅಂಶವಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮೌಲಾನಾ ಅಜಾದ್ ಅವರ ಜೀವನಾಧಾರಿತ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ವಿದ್ಯಾರ್ಥಿನಿಯರು ಇಂತಹ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನವನ್ನು ಪಡೆದುಕೊಂಡು, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಹಾಗೂ ಮಹಿಳಾ ವಿವಿಯ ವಿವಿಧ ವಿಭಾಗಗಳ ವಿಧ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪದ್ಮಶ್ರೀ ಚೌಗಲೆ ನಿರೂಪಿಸಿದರು. ಡಾ. ಗುಲಾಬ ರಾಠೋಡ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ರಾಣಿ ತಿಮ್ಮಗೌಡರ್ ಅತಿಥಿ ಪರಿಚಯಿಸಿದರು, ಅಕ್ಷತಾ ರಾಠೋಡ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 