ಮೇ. 16ಕ್ಕೆ ಡಾ. ಬಿ.ಆರ್‌. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಅದ್ದೂರಿ ಜಯಂತ್ಯೋತ್ಸವ

ಮೇ. 16ಕ್ಕೆ  ಡಾ. ಬಿ.ಆರ್‌. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಅದ್ದೂರಿ ಜಯಂತ್ಯೋತ್ಸವ  May 16th: Grand jubilee celebrations of Dr. B.R. Ambedkar and Dr. Babu Jagjivan Ram

ಲೋಕದರ್ಶನ ವರದಿ 

          ನರೇಗಲ್  14:  ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ  ಹಾಗೂ ಡಾ. ಬಿ. ಆರ್‌. ಅಂಬೇಡ್ಕರ್ ಅಭಿಮಾನಿ ಬಳಗ ಮತ್ತು ಶ್ರೀ ಜಿ. ಎಸ್‌. ಪಾಟೀಲ ಅವರ ಅಭಿಮಾನಿ ಬಳಗದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ  ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತ್ಯೋತ್ಸವ ಆಚರಣೆಯನ್ನು ಮೇ 16 ರಂದು ಸಂಜೆ 4 ಗಂಟೆಗೆ ನರೇಗಲ್ ಪಟ್ಟಣದ ಅಂಬೇಡ್ಕರ್ ಸರ್ಕಲ್ ಹಳೇ ಬಸ್ ನಿಲ್ದಾಣ ಸಮೀಪದಲ್ಲಿ ಆಯೋಜನೆ ಮಾಡಲಾಗಿದೆ ಎಂದು  ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ಹಾಗೂ ಗಜೇಂದ್ರಗಡ ತಾಲ್ಲೂಕು ಘಟಕ ಕಾಂಗ್ರೆಸ್ ಪ್ರಚಾರ ಸಮಿತಿ  ಅಧ್ಯಕ್ಷ ಮೈಲಾರ​‍್ಪ ವೀ. ಚಳ್ಳಮರದ ಹೇಳಿದರು. 

ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದ ಸಾನಿಧ್ಯವನ್ನು  ಗದಗ ವೀರೇಶ್ವರ ಪುಣ್ಯಶ್ರಮ ಕಲ್ಲಯ್ಯಜ್ಜನವರು, ಹಿರೇಮಠ-ನರೇಗಲ್ಲ, ಮೂಲಿಮಠ-ಸವದತ್ತಿಯ  ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ರೋಣ ಬೂದಿಶ್ವರಮಠದ ಡಾ. ವಿಶ್ವನಾಥ ಮಹಾಸ್ವಾಮಿಗಳು, ನರೇಗಲ್ಲನ ರಹಿಮಾನ ಶಾವಲಿ ದರ್ಗಾದ ಸಯ್ಯದ್ ಮಂಜೂರ ಹುಸೇನ ಶ್ಯಾವಲಿ ಶರಣರು,  ಇಟಗಿಯ ಶಿವಶರಣ ಗೆದಿಗೆಪ್ಪಜ್ಜನವರು, ಸೂಡಿ ಮರುಳು ಶಿದ್ದೇಶ್ವರ ಸ್ವಾಮಿಗಳು ವಹಿಸಲಿದ್ದಾರೆ. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಣ ಮತಕ್ಷೇತ್ರದ ಶಾಸಕರು ಹಾಗೂ ,  ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರಿನ ಅಧ್ಯಕ್ಷರಾದ  ಜಿ. ಎಸ್‌. ಪಾಟೀಲರು ವಹಿಸುವರು. ಡಾ. ಬಿ.ಆರ್‌. ಕಾನೂನು ನ್ಯಾಯ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸದ್ಯೋಮ ಇಲಾಖೆಗಳ ಸಚಿವರು  ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌. ಕೆ. ಪಾಟೀಲರು ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಕರ್ನಾಟಕ ಸರ್ಕಾರ  ಬೆಂಗಳೂರಿನ ಅಬಕಾರಿ ಇಲಾಖೆಯ ಸಚಿವರಾದ ಆರ್‌.ಬಿ. ತಿಮ್ಮಾಪುರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೋಣ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮಿಥುನ್ ಜಿ. ಪಾಟೀಲ ಅವರು ಡಾ. ಬಿ.ಆರ್‌. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಗದಗ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಕೃಷ್ಣೇಗೌಡ ಎಚ್‌. ಪಾಟೀಲ ಅವರು ಡಾ. ಬಾಬು ಜಗಜೀವನ್ ರಾಮ್  ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ  ಅಕ್ಷಯ ಐ. ಪಾಟೀಲ ಅವರು ಸಂವಿಧಾನ ಪೀಠಿಕೆಯ ವಾಚನ ಮಾಡಲಿದ್ದಾರೆ. ವಕ್ತಾರರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬಿಎಂಟಿಸಿಯ ರಾಜ್ಯ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ ಅವರು ಡಾ. ಬಿ.ಆರ್‌. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. 

ಇದೇ ಸಂದರ್ಭದಲ್ಲಿ ರೋಣ ಮತಕ್ಷೇತ್ರದ ಶಾಸಕರಾದ ಜಿ. ಎಸ್‌. ಪಾಟೀಲರಿಗೆ ಜೈ ಭೀಮ್ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಿಸ್ವಾರ್ಥದಿಂದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎಂಟು ಮಹನಿಯರಿಗೆ ವಿಶೇಷ ಸನ್ಮಾನ ನಡೆಯಲಿದೆ. ಅಷ್ಟೇ ಅಲ್ಲದೆ ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗೌರವಾನ್ವಿತ ಮಾದಿಗ ಸಮುದಾಯದವರಿಗೆ ಸನ್ಮಾನ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯಲಿವೆ ಎಂದರು. 

ಕಾರ್ಯಕ್ರಮದ ನಡುವೆ ಆಗಾಗ ಹಾಗೂ ಕಾರ್ಯಕ್ರಮದ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪುನೀತ ಮೆಲೋಡಿಸ್ ಪಲ್ಲವಿ ಗಾನಾ ಬಜಾನಾ ಆರ್ಕೆಸ್ಟ್ರಾ ತಂಡದಿಂದ ರಸಮಂಜರಿ ಕಾರ್ಯಕ್ರಮವನ್ನು ಜಾನಪದ ಸರದಾರ ಪರಸು ಕೇಲೂರ, ಟ್ರೆಂಡಿಂಗ್ ಸ್ಟಾರ್ ಮ್ಯೂಜಿಕ ಮೈಲಾರಿ, ಗಿಡಗಿಣಿ ಖ್ಯಾತಿಯ ತೃಪ್ತಿ ಧಾರವಾಡ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.