ಮೇ 6 ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ 7 ಜನ ಶಿಕ್ಷಕರು ನಿರ್ದೇಶಕರಾಗಿ ಆಯ್ಕೆ
May 6 Primary School Teachers Association President and Vice President Selection Process 7 teachers
ಲಕ್ಷ್ಮೀಶ್ವರ 03 : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮೇ 6 ರಂದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಶುಕ್ರವಾರ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆಯಿತು ಆದರೆ ಯಾವುದೇ ಚುನಾವಣೆ ನಡೆಯದೆ 7 ಜನ ಶಿಕ್ಷಕರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು ನೂತನವಾಗಿ ಪ್ರಾಥಮಿಕ ಶಾಲಾ ಸಂಘದ ನಿರ್ದೇಶಕರಾಗಿ ಹುಸೇನಸಾಬ್ ಪಟ್ಟಣದ, ಮಹಾದೇವಪ್ಪ ಭರಮಗೌಡರ, ಮುತ್ತಣ್ಣ ಹುಬ್ಬಳ್ಳಿ, ಶರಣಪ್ಪ ಸೋಗಿ, ಶ್ರೀಕಾಂತ ನಂದೆಣ್ಣವರ, ಗೀತಾ ಹಳ್ಳಾಳ, ಸುನಂದಾ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿಕ್ಷಕರ ಸಂಘದ ಹಾಗೂ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳು ಆಯ್ಕೆಯಾದ ಶಿಕ್ಷಕರ ಸಂಘದ ನಿರ್ದೇಶಕರನ್ನು ಹೂಮಾಲೆ ಹಾಕಿ ಸ್ವಾಗತಿಸಿದರು ಈ ಸಮಯದಲ್ಲಿ ಮಾತನಾಡಿದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಇಂದು ಅವಿರೋಧವಾಗಿ ಆಯ್ಕೆಯಾದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರು ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಮೇಲೆ ಅಭಿಮಾನವನ್ನು ಇಟ್ಟು ನಿಮ್ಮನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ ಆಯ್ಕೆ ಮಾಡಿದ ಎಲ್ಲ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ನಿಮ್ಮ ಸಹಕಾರ ನಿರಂತರವಾಗಿ ಇರಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಹರ್ಲಾಪೂರ,ಅವರು ಮಾತನಾಡಿ, ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡುವ ಮೂಲಕ ಶಿಕ್ಷಕರ ಶ್ರೇಯೋಭಿವೃದ್ಧಿಗೆ ತಾವುಗಳು ತೆಗೆದುಕೊಳ್ಳುವ ನಿರ್ಧಾರಗಳಿಗೆ ಸದಾ ಬೆಂಬಲ ಇರುತ್ತದೆ ಎಂದರು ಈ ಸಮಯದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಗುರುರಾಜ ಹವಳದ ಎಂ.ಡಿ. ವಾರದ, ಬಸವರಾಜ ಯತ್ತಿನಹಳ್ಳಿ, ಪಿ.ಪಿ. ಹಿರೇಮಠ, ಎಂ.ಐ. ಕಣಕೆ, ಎಸ್.ಬಿ. ಅಣ್ಣಿಗೇರಿ, ಎಲ್.ಎಸ್. ನಂಬೆಣ್ಣವರ, ಎಸ್. ಎಚ್. ಉಮಚಗಿ, ಡಿ.ಎನ್. ಸೊರಟೂರ ಬಿ.ಎಂ. ಯರಗುಪ್ಪಿ, ಎಸ್.ವಿ. ಕನೋಜ, ಮಂಜುನಾಥ ಕೊಕ್ಕರಗುಂದಿ ಹಾಗೂ ಉಪ ಚುನಾವಣಾಧಿಕಾರಿ ಬಣಕಾರ ಸೇರಿದಂತೆ ಇನ್ನೂ ಅನೇಕ ಪ್ರಾಥಮಿಕ ಶಾಲಾ ಶಿಕ್ಷಕರು ಇದ್ದರು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 