ಗದಗದ ಸೌಹಾರ್ದ ಪರಂಪರೆ ಉಳಿಯಲಿ; ವಿವಾದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಿ: ಕೃಷ್ಣ ಹಡಪದ ಮನವಿ
May Gadag's tradition of harmony be preserved; find a peaceful solution to the dispute: Krishna Hada
ಗದಗ 06: ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಹಾಗೂ ಸರ್ವಧರ್ಮ ಸೌಹಾರ್ದದ ತಾಣವಾಗಿರುವ ಗದಗದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಶಾಂತಿ ಮತ್ತು ಪರಸ್ಪರ ಗೌರವದಿಂದ ಬಗೆಹರಿಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಚ್. ಹಡಪದ ಮನವಿ ಮಾಡಿದ್ದಾರೆ. ಗಂಗಾಪುರ ಪೇಟೆಯ ಶ್ರೀ ದುರ್ಗಾದೇವಿ ದೇವಸ್ಥಾನ ಹಾಗೂ ಜಗದ್ಗುರು ವೀರೇಶ್ವರ ಪುಣ್ಯಾಶ್ರಮದ ನೂತನ ರಥದ ಗಾಲಿಗಳ ಮೇಲಿನ ಹೆಸರಿನ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆ ಹಿನ್ನೆಲೆಯಲ್ಲಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಈ ವಿಚಾರದಲ್ಲಿ ದಾನಿ ಶ್ರೀ ಫಿರಸಾಬ್ ಕೌತಾಳ ಅವರು ತಮ್ಮ ಹೆಸರನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದು ಸಮಾಜದಲ್ಲಿ ಸೌಹಾರ್ದ ಕಾಪಾಡುವ ಪ್ರಬುದ್ಧ ನಿರ್ಧಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗದಗ ಜಿಲ್ಲೆ ಧಾರ್ಮಿಕ ಸಾಮರಸ್ಯಕ್ಕೆ ಹೆಸರುವಾಸಿಯಾಗಿದ್ದು, ಹಿಂದೂ-ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯಗಳ ಜನರು ಪರಸ್ಪರ ಸಹಬಾಳ್ವೆಯಿಂದ ಬದುಕುತ್ತಿರುವ ಪರಂಪರೆಯನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜನಪ್ರತಿನಿಧಿಗಳು, ಮಠ ಹಾಗೂ ದೇವಸ್ಥಾನದ ಆಡಳಿತ ಮಂಡಳಿ, ದಾನಿ ಕುಟುಂಬದವರು, ವಿವಿಧ ಸಂಘಟನೆಗಳ ಮುಖಂಡರು ಮತ್ತು ಹಿರಿಯರು ಒಂದೇ ವೇದಿಕೆಯಲ್ಲಿ ಸಭೆ ನಡೆಸಿ ಪರಸ್ಪರ ಚರ್ಚೆಯ ಮೂಲಕ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಯಾವುದೇ ರೀತಿಯ ದ್ವೇಷ ಅಥವಾ ಉದ್ವಿಗ್ನತೆಗೆ ಅವಕಾಶ ನೀಡದೆ, ಶಾಂತಿ, ಪ್ರೀತಿ ಹಾಗೂ ಸಾಮರಸ್ಯದ ವಾತಾವರಣದಲ್ಲಿ ಸಮಸ್ಯೆ ಬಗೆಹರಿದರೆ ಗದಗ ಜಿಲ್ಲೆಯ ಸೌಹಾರ್ದ ಪರಂಪರೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೃಷ್ಣ ಹಡಪದ ತಿಳಿಸಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 