ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ  May students stay away from drug addiction and build a bright future
ಲೋಕದರ್ಶನ ವರದಿ 
ವಿಜಯಪುರ 01 :  ಬಿ.ಡಿ.ಪಿ.ಎಚ್‌.ಡಬ್ಲ್ಯು. ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಅಂಬವ್ವ ಖೇಡ ಮಹಾವಿದ್ಯಾಲಯದಲ್ಲಿ ‘10 ಕೋಟಿ ಜನರಿಗೆ ನಶಾಮುಕ್ತಿ ಮಹಾ ಅಭಿಯಾನ’ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.  
ಕಾರ್ಯಕ್ರಮದಲ್ಲಿ ಓಂ ಶಾಂತಿ ಸಂಸ್ಥೆಯ ದಿವ್ಯಾ ಅಕ್ಕ ಮಾತನಾಡಿ, ಯುವಕರು ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಒಳಗಾಗದೆ ನಶಾಮುಕ್ತ ಜೀವನ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಜಾಗೃತರಾಗಿ ಉತ್ತಮ ಆರೋಗ್ಯ ಹಾಗೂ ಸದೃಢ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಶಾಮುಕ್ತಿಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.  
ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ಡಾ. ವಿಜಯಲಕ್ಷ್ಮೀ ಹಿಪ್ಪರಗಿ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡು ತಮ್ಮ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಖಜಾಂಚಿ ವಿನೋದ್ ಎಂ. ಖೇಡ ಮಾತನಾಡಿ, ವಿದ್ಯಾರ್ಥಿಗಳು ಮುಗ್ಧರಾಗಿದ್ದು, ಯಾವುದೇ ರೀತಿಯ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು. ಯುವಜನತೆ ನಶೆಯಿಂದ ದೂರವಿದ್ದು, ಶಿಕ್ಷಣದ ಮೂಲಕ ಉತ್ತಮ ಭವಿಷ್ಯದತ್ತ ಗಮನಹರಿಸಬೇಕು ಎಂದು ತಿಳಿಸಿದರು.  
ಕಾರ್ಯಕ್ರಮದ ನಿರೂಪಣೆಯನ್ನು ಐಕ್ಯೂಎಸಿ ಘಟಕದ ಮುಖ್ಯಸ್ಥ ಎಲ್‌.ಎಸ್‌. ಮುಲ್ಲಾ ನಡೆಸಿಕೊಟ್ಟರು. ಶಿವನಗೌಡ ಪಾಟೀಲ, ವಿಶಾಲಾಕ್ಷಿ, ಮೀನು ಅಕ್ಕಾ, ಡಿ.ಬಿ. ಕೋಟ್ನಾಳ್ ಮೇಡಂ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.