ಮಹಾನಾಯಕ, ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಸರಕಾರ ಆಚರಿಸಲಿ -ವಿನೋದ ಖೇಡ
May the government celebrate the birth anniversary of Mahanayaka, Swami Ramananda Theertha -Vinoda K
ಲೋಕದರ್ಶನ ವರದಿ
ವಿಜಯಪುರ 24 : ವಿಜಯಪುರ ಜಿಲ್ಲಾ ಸಂಘ -ಸಂಸ್ಥೆಗಳ ಮುಖಂಡರು ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3 ರಂದು ರಾಜ್ಯಾಧ್ಯಂತ ಎಲ್ಲ ಶಾಲಾ ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ಸರಕಾರದಿಂದ ಜಯಂತಿ ಆಚರಣೆ ಮಾಡಲು ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂಬಿ ಪಾಟೀಲ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಸಂಘ -ಸಂಸ್ಥೆಗಳ ಒಕ್ಕೂಟದ ಮುಖಂಡರಾದ ವಿನೋದ ಖೇಡ ಅವರು ಸ್ವಾಮಿ ರಾಮಾನಂದ ತೀರ್ಥರೆಂದು ಹೆಸರುವಾಸಿಯಾದ ವೆಂಕಟರಾವ ಖೇಡಗೀಕರ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ 3 ಅಕ್ಟೋಬರ್ 1903 ಜನಿಸಿದ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಹೈದರಾಬಾದ್ ಸಂಸ್ಥಾನದ ವಿಮೋಚನಾ ಹೋರಾಟದ ಮಹಾನಾಯಕರಾಗಿ ಸಲ್ಲಿಸಿರುವ ಸೇವೆ ಅಮೋಘವಾಗಿದೆ. ರಾಜ್ಯ ಸರಕಾರ ಅವರ ಜನ್ಮದಿನವಾದ ಅಕ್ಟೋಬರ್ 3ನ್ನು ಸರಕಾರಿ ಜಯಂತಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಲ್ಲೆಯ ಸಂಘ -ಸಂಸ್ಥೆಗಳ ಮುಖಂಡರಾದ ಮಲ್ಲನಗೌಡ ಪಾಟೀಲ (ಬರಟಗಿ ),ಪ್ರದೀಪ ದೇಶಪಾಂಡೆ, ಕಲ್ಲಪ್ಪ ಶಿವಶರಣ, ಅಂಬಣ್ಣ ಗುನ್ನಾಪುರ, ರಾಜು ತಡಲಗಿ, ಸಂತೋಷ ಕಲಗುಡಿ, ರಾಜು ಕುಮಟಗಿ,ಅಶೋಕ ಚೋಳಕೆ, ಅಯೂಬಖಾನ ನದಾಫ್,ಮೊಹ್ಮದ್ ಬಾಗವಾನ, ಎಂ ಎಂ ಹಂಗರಗಿ, ಸಂಗನಗೌಡ ಪಾಟೀಲ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 