ನಿವೃತ್ತ ಶಿಕ್ಷಕರ ಜೀವನ ಸುಖಕರವಾಗಿರಲಿ: ಸಾಹಿತಿ ಶ್ರೀಕಾಂತ
May the lives of retired teachers be happy: Writer Srikanth
ತಾಳಿಕೋಟೆ 11 : ಸಮಾಜದಲ್ಲಿರುವ ಎಲ್ಲ ವೃತ್ತಿಗಳು ಮಾನವ ಪ್ರಯತ್ನದಿಂದ ಸಿಗುತ್ತವೆ ಆದರೆ ಶಿಕ್ಷಕ ವೃತ್ತಿ ದೇವರ ಕೃಪೆ ಇದ್ದರೆ ಮಾತ್ರ ಸಿಗುತ್ತದೆ. ಈ ಸೌಭಾಗ್ಯ ಎಲ್ಲರಿಗೂ ಸಿಗುವುದಿಲ್ಲ ಎಂದು ಜೆಎಸ್ ಜಿ ಫೌಂಡೇಶನ್ ಕಾರ್ಯದರ್ಶಿ, ಸಾಹಿತಿ ಶ್ರೀಕಾಂತ ಪತ್ತಾರ ಹೇಳಿದರು. ತಾಲ್ಲೂಕಿನ ಬ.ಸಾಲವಾಡಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಬೋಧಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾಗಿರುವ ಐ.ಎಂ.ಚಿಮ್ಮಲಗಿ ಸಹಶಿಕ್ಷಕರಿಗೆ ಸರ್ಕಾರಿ ಪ್ರೌಡಶಾಲೆ ಮತ್ತು ನಾಗರಿಕರ ಸಂಯುಕ್ತಾಶ್ರಯದಲ್ಲಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.
ಈ ಶಾಲೆಯಲ್ಲಿ 20 ವರ್ಷಗಳವರೆಗೆ ನಿರಂತರವಾಗಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಚಿಮ್ಮಲಗಿ ಅವರು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ್ದಾರೆ ಅವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಅವರ ನಿವೃತ್ತ ಜೀವನ ಸುಖಕರವಾಗಿರಲೆಂದು ಹಾರೈಸುತ್ತೇನೆ ಎಂದರು. ಸಮಾರಂಭವನ್ನು ಉದ್ಘಾಟಿಸಿ ವಿಜಯಪುರ ಡಯಟ್ ಹಿರಿಯ ಉಪನ್ಯಾಸಕಿ ರೇಣುಕಾ ಕಲ್ಬುರ್ಗಿ ಮಾತನಾಡಿ ಚಿಮ್ಮಲಗಿ ಅವರ ಸೇವಾ ನಿಷ್ಠೆಯನ್ನು ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿ ನಿವೃತ್ತ ಶಿಕ್ಷಕ ಚಿಮ್ಮಲಗಿ ಅವರು ಮಾತನಾಡಿ ತಾವು ಎಂದು ನನಗೆ ನೀಡಿದ ಈ ಗೌರವ ಅವಿಸ್ಮರಣೆಯವಾದದ್ದು ನಾನು ಕೇವಲ ನನ್ನ ವೃತ್ತಿಯನ್ನು ಮಾತ್ರ ನಿರ್ವಹಿಸಿದ್ದೇನೆ ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಗೌರವಕ್ಕೆ ಋಣಿಯಾಗಿದ್ದೇನೆ ಎಂದರು. ಶಿಕ್ಷಣ ಪ್ರೇಮಿ ವೇ.ಮೂ.ಬಸಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 