ಕನ್ನಡ ನಾಡು-ನುಡಿಗಾಗಿ ಸಂಘಟನೆ ಶ್ರಮಿಸಲಿ: ಡಾ. ಪ್ರಭುಗೌಡ
May the organization strive for the cause of the Kannada land and language: Dr. Prabhugouda
ದೇವರಹಿಪ್ಪರಗಿ, ಸೆ.18: ಕನ್ನಡ ನಾಡು, ನುಡಿ, ನೆಲ ಹಾಗೂ ಜಲ ಸಂರಕ್ಷಣೆಗಾಗಿ ಸಂಘಟನೆಗಳು ನಿರಂತರವಾಗಿ ಶ್ರಮಿಸಬೇಕು ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರು ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕನ್ನಡಿಗರ ಹಿತಾಸಕ್ತಿಗಾಗಿ ಸಂಘಟಿತರಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ಷ.ಬ್ರ. ಶ್ರೀ ಶಿವಯೋಗಿ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಕನ್ನಡ ್ಣೂಳ್ದಹಿ್ದೂಳ್ತ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆಗೆ ಯುವಜನತೆ ಮುಂದಾಗಬೇಕು ಎಂದು ಆಶಿಸಿದರು.
ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ರಹೀಮಾನ ಕನಕಲ್ ಮಾತನಾಡಿ, ಸಂಘಟನೆಯ ವತಿಯಿಂದ ಬಡವರು, ಕಾರ್ಮಿಕರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ದೊರಕಿಸಲು ಶ್ರಮಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಪ.ಪಂ. ಉಪಾಧ್ಯಕ್ಷ ರಮೇಶ ಮಸಿಬಿನಾಳ, ಮುಖಂಡರಾದ ಸಂಗನಗೌಡ ಹರನಾಳ, ಸಿದ್ದನಗೌಡ ಪಾಟೀಲ, ಹುಸೇನ್ ಕೊಕಟನೂರ, ಸಾಹೇಬಗೌಡ ಪಾಟೀಲ, ನಾಗು ಕಮತಗಿ, ಯಾಕೂಬ್ ಶಹಾಪುರ, ಅಬೂಬಕರ್ ಯಲಗಾರ, ತೌಸಿಫ್ ಪಟೇಲ್, ಗುರುಪಾದ ಮಣೂರ, ಅಜೀಮ್ ಪಟೇಲ್ ಸೇರಿದಂತೆ ಕರವೇ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 