ವಿಘ್ನೇಶ್ವರನ ಕೃಪೆಯಿಂದ ನಾಡಿನ ಜನತೆಗೆ ಒಳಿತಾಗಲಿ: ಶಾಸಕ ವಿಶ್ವಾಸ ವೈದ್ಯ ಆಶಯ
May the people of the state prosper through the grace of Lord Vigneshwara: MLA Vishwas Vaidya expres
ಸವದತ್ತಿ 16 : ನಗರದ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶನಿಗೆ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಸಮಸ್ತ ನಾಡಿನ ಜನತೆಗೆ ಒಳಿತನ್ನು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಶ್ವಾಸ ವೈದ್ಯರು, ವಿಘ್ನೇಶ್ವರನ ಕೃಪೆಯಿಂದ ಸವದತ್ತಿ ನಗರದ ಸಮಸ್ತ ಜನತೆಗೆ ಹಾಗೂ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗಕ್ಕೆ ಸುಖ, ಶಾಂತಿ, ನೆಮ್ಮದಿ ದೊರೆಯಲಿ. ಎಲ್ಲರ ಕಾರ್ಯಗಳೂ ಯಶಸ್ವಿಯಾಗಲಿ ಎಂದು ಹಾರೈಸಿದರು. ನಗರಸಭೆ ಪೌರಾಯುಕ್ತರು ಸಂಗನಬಸಯ್ಯ ಗದಗಿಮಠ ಮಾತನಾಡಿ, ಗಣೇಶೋತ್ಸವದ ನಿಮಿತ್ತ ಬುಧವಾರದಂದು ವಿಶೇಷ ಸತ್ಯನಾರಾಯಣ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಆಗಮಿಸಿದ ಭಕ್ತರು ಹಾಗೂ ಸಾರ್ವಜನಿಕರಿಗಾಗಿ ಮಹಾ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು ಎಂದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂದು ಮನವಿ ಮಾಡಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿ.ಎನ್. ಪ್ರಭುನವರ, ನಗರಸಭೆ ಹಿರಿಯ ಆರೋಗ್ಯ ನೀರೀಕ್ಷಕ ಚಂದ್ರಶೇಖರ ಮಲಕಣ್ಣವರ, ಕಿರಿಯ ಆರೋಗ್ಯ ನೀರೀಕ್ಷಕ ರಾಘವೇಂದ್ರ ವಾಡಕರ, ಎಸ್.ವೈ. ಹಾದಿಮನಿ, ಬಿ.ಎಚ್. ಆನಿ, ಶಿವಾಜಿ ಕುದರಿ, ಮಹಾಬಲೇಶ್ವರ ಕಡಕೋಳ, ಬಿ.ಎಚ್.ಆನಿ, ಸಂತೋಷ ಕಾಳೆ, ಮೈಲಾರಿ ಕಾಳೆ, ಅಬ್ದುಲ್ ದಫೇದಾರ ಹಾಗೂ ನಗರಸಭೆಯ ಪೌರ ಕಾರ್ಮಿಕರು ಮತ್ತು ಸಾರ್ವಜನಿಕರು, ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 