ಲಖ್ನೋ, ಏಪ್ರಿಲ್ 8,ಸಾರ್ವಜನಿಕ ಹಿತಾಕ್ತಿಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಗಳು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‍ಪಿ)ದ ವರಿಷ್ಠೆ ಮಾಯಾವತಿ ಬುಧವಾರ ಹೇಳಿದ್ದಾರೆ. ‘ದೇಶದಲ್ಲಿ ಕೊರೊನವೈರಸ್ ಸೋಂಕು ಹರಡುವಿಕೆಯಿಂದ ಎದುರಾಗಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ದೇಶದ 130 ಕೋಟಿ ಜನರ ವಿಶಾಲ ಹಿತಾಸಕ್ತಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು.’ ಎಂದು ಮಾಯಾವತಿ ಟ್ವೀಟರ್ ನಲ್ಲಿ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯ ಇಂತಹ ನಿರ್ಧಾರಗಳನ್ನು ಬಿಎಸ್‍ಪಿ ಖಂಡಿತ ಸ್ವಾಗತಿಸುತ್ತದೆ ಎಂದು ಅವರು ಹೇಳಿದ್ದಾರೆ.