ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಿ : ಮೇಯರ್ ಕರಡಿ ಸೂಚನೆ
Mayor Karadi instructs to ensure that rainwater flows smoothly
ೋಕದರ್ಶನ ವರದಿ
ವಿಜಯಪುರ 16: ನಗರದಲ್ಲಿ ಮಳೆಯಿಂದ ಸಂಗ್ರಹವಾಗುವ ಮಳೆ ನೀರನ್ನು ಸರಾಗವಾಗಿ ಹರಿದು ಹೋಗಲು ಕೋಟೆ ಗೋಡೆ ಸುತ್ತಲಿನ ಕಂದಕಗಳು ಹಾಗೂ ರಾಜ ಕಾಲುವೆಗಳಲ್ಲಿ ಸಂಗ್ರಹಣೆಯಾಗಿರುವ ಮಣ್ಣು ಹಾಗೂ ಹೂಳನ್ನು ತೆಗೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಪಾಲಿಕೆಯ ಸಭಾಭವನದಲ್ಲಿ ಮೇಯರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪ್ರವಾಹ ಎದುರಾದಲ್ಲಿ ಸಮರ್ಥವಾಗಿ ಎದುರಿಸುವ, ಬೀದಿ ದೀಪ, ಸ್ವಚ್ಛತೆ, ನೀರು ಪೂರೈಕೆ ಕುರಿತಾಗಿ ಪಾಆಲಿಕೆ ಸದಸ್ಯರು ಹಾಗು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದರು. ನಗರದಲ್ಲಿರುವ ಅಪಾಯಕಾರಿ ಮರ ಮತ್ತು ಅನೇಕ ಮರಗಳ ಟೊಂಗೆಗಳು ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಸಂಪರ್ಕ ಹಾಗೂ ಯಾವುದೇ ಹಾನಿಯಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಿಕೊಳ್ಳಬೇಕು.
ಮಳೆಗಾಲದಲ್ಲಿ ಮುಂಜಾಗ್ರತೆಯಾಗಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮಳೆಗಾಲದ ಸನ್ನಿವೇಶದಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಪಾಲಿಕೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು. ಪಾಲಿಕೆಯ ಸದಸ್ಯರು ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಮಳೆಯಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನ ಜೀವನಕ್ಕೆ ತೊಂದರೆ ಉಂಟಾಗದಂತೆ ಹಾಗೂ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅನಾನುಕೂಲವಾಗದ ನಿಟ್ಟಿನಲ್ಲಿ ಈ ಕುರಿತು ಮುಂಜಾಗೃತ ಕ್ರಮವಾಗಿ ಅವಶ್ಯಕ ಕಾಮಗಾರಿಗಳನ್ನು ಕೈಗೊಂಡು ಪ್ರವಾಹ ಪರಿಸ್ಥಿತಿಯಾಗದಂತೆ ಪರಿಹಾರ ಕ್ರಮ ತೆಗೆದುಕೊಳ್ಳಬೇಕೆಂದು ತಿಳಿಸಿದರು. ಅಪಾಯಕಾರಿ ರೀತಿಯಲ್ಲಿ ಇರುವ ವಿದ್ಯುತ್ ಕಂಬಗಳನ್ನು ಈ ಕೂಡಲೇ ಸ್ಥಳಾಂತರ ಮಾಡುವಂತೆ ಹಾಗೂ ಹೊಸದಾಗಿ ವಿದ್ಯುತ್ ಕಂಬಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳ ಜೀವಕ್ಕೆ ಹಾನಿಯಾಗದಂತೆ ಕೂಡಲೆ ಕ್ರಮ ವಹಿಸುವಂತೆ ಹೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 