ಅ.2 ರಂದು ಅರ್ಥಪೂರ್ಣ ಗಾಂಧಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ
Meaningful Gandhi and Shastri Jayanti celebrations on October 2nd
ಅ.2 ರಂದು ಅರ್ಥಪೂರ್ಣ ಗಾಂಧಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ
ಹಾವೇರಿ 23 : ಅಕ್ಟೋಬರ್ 2 ರಂದು ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಅವರು ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲ್ಲಿ ಮಂಗಳವಾರ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಾಂಧಿ ಜಯಂತಿ ಅಂಗವಾಗಿ ಈ ವರ್ಷ ಎರಡು ದಿನ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು, ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಸೆಪ್ಟೆಂಬರ 29 ರಂದು ಎಲ್ಲ ಕಚೇರಿಗಳ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಹಾಗೂ ಸೆ. 30 ರಂದು ನಗರದ ವಾರ್ಡ್‌ವಾರು ಸಾಮೂಹಿಕ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಪ್ರತಿ ವಾರ್ಡ್‌ಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.
ಅಕ್ಟೋಬರ್ 2ರ ಗಾಂಧಿ ಜಯಂತಿ ದಿನ ಮುಂಜಾನೆ ಶ್ರಮದಾನ, ನಂತರ ಗಾಂಧಿ ವೃತ್ತದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿಗೆ ಮಾಲಾರೆ್ಣ, ಸದ್ಭಾವನಾ ನಡಿಗೆ ಹಾಗೂ ವೇದಿಕೆ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ, ಗಾಂಧಿ, ಶಾಸ್ತ್ರೀಜಿ ಅವರ ವಿಚಾರ ಧಾರೆ ಕುರಿತು ಉಪನ್ಯಾಸ, ಗಾಂಧಿ ಪ್ರೀಯ ಗೀತೆಗಳ ಗಾಯನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡೆಸುವ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಜಿಲ್ಲಾ ನಿರ್ಮಿತಿ ಕೇಂದ್ರದ ತಿಮ್ಮೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 