ಅರ್ಥಪೂರ್ಣ ಸ್ವಾಂತ್ರ್ಯೋತ್ಸವ ಆಚರಣೆ- ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
Meaningful Independence Day Celebration – DC Directs Necessary Preparations
ಲೋಕದರ್ಶನ ವರದಿ
ಹಾವೇರಿ 03: ಜಿಲ್ಲಾಡಳಿತದಿಂದ ಆಗಸ್ಟ್ 15 ರಂದು ಆಯೋಜಿಸುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆಮಾಡಿಕೊಳ್ಳಬೇಕು. ಈ ಕುರಿತಂತೆ ವಿವಿಧ ಇಲಾಖೆಗಳಿಗೆ ವಹಿಸಿರುವ ಕೆಲಸಗಳನ್ನು ಸಮನ್ವಯದಿಂದ ಹಾಗೂ ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಶಿಷ್ಟಾಚಾರದ ಅನುಸಾರ ಸ್ವಾತಂತ್ರ್ಯೋತ್ಸವದ ಆಮಂತ್ರಣ ಪತ್ರಿಕೆ, ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರ ಸನ್ಮಾನಕ್ಕೆ ಆಯ್ಕೆ, ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಅಲಂಕಾರ, ರಾಷ್ಟ್ರಧ್ವಜಾರೋಹಣಕ್ಕೆ ಸಿದ್ಧತೆ, ಆಸನ ವ್ಯವಸ್ಥೆ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ, ಲಘು ಉಪಹಾರ, ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಪೂರಕ ಸಿದ್ಧತೆಗಳನ್ನು ಮಾಡಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ 14 ಮತ್ತು 15 ರಂದು ನಗರದ ವಿವಿಧ ವೃತ್ತಗಳು, ನಗರ ಸ್ವಚ್ಛತೆ, ವಿವಿಧ ವೃತ್ತಗಳಿಗೆ ದೀಪಾಲಂಕಾರ, ಕಚೇರಿಗಳಿಗೆ ದೀಪಾಲಂಕಾರ, ರಾಷ್ಟ್ರಗೀತೆ ಹಾಗೂ ನಾಡಗೀತೆ ತಂಡದ ಆಯ್ಕೆ, ಪೊಲೀಸ್ ಬ್ಯಾಂಡ್, ರಾಷ್ಟ್ರಧ್ವಜಾರೋಹಣಕ್ಕೆ ಹಾಗೂ ಪಥಸಂಚಲನಕ್ಕೆ ಸಿದ್ಧತೆ, ಸನ್ಮಾನಿತರು, ಮಾಧ್ಯಮದವರು, ಗಣ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್, ಅಂಬ್ಯುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಗಸ್ಟ 15ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ, 9-15ಕ್ಕೆ ಪೊಲೀಸ್, ಗೃಹರಕ್ಷಕದಳ, ಎನ್.ಸಿ.ಸಿ., ಸ್ಕೌಟ್ಸ್ ಆಂಡ್ ಗೈಡ್ಸ್, ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಫಥಸಂಚಲನ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ, 9-30 ರಿಂದ 10-30ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಲ್ಜಿತ್‌ಕುಮಾರ, ಉಪ ವಿಭಾಗಾಧಿಕಾರಿ ಕು.ಕಲ್ಯಾಣಿ ಕಾಂಬ್ಳೆ, ಡಿವೈಎಸ್‌ಪಿ ಗಿರಿಮಲ್ಲಪ್ಪ ತಳಕಟ್ಟಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಲತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಠೋಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಪೌರಾಯುಕ್ತ ಕಾಂತರಾಜು, ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 